ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ


ಕುಂದಾಪುರ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ  ವೃತ್ತಿ ಮಾರ್ಗದರ್ಶನ ವಿಭಾಗ   ಮತ್ತು ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ  ಉಡುಪಿ ಶಾಖೆಯ  ಸಹಯೋಗದಲ್ಲಿ  ಸರಕಾರಿ ಪದವಿ ಪೂರ್ವ ಕಾಲೇಜು  ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿಎ, ಸಿಎಸ್ ಮತ್ತು ಇತರ ಕೋರ್ಸ್‌ಗಳ ಬಗ್ಗೆ ವಿವರವಾದ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳಾದ ಸಿಎ ವಸಂತ ಶ್ಯಾನುಭೋಗ್‌ ವಿ. ಅವರು ನೀಡಿದರು.

ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾಲೇಜಿನ ಹಿರಿಯ ಉಪನ್ಯಾಸಕ ಚಂದ್ರಶೇಖರ, ವೃತಿ ಮಾರ್ಗದರ್ಶನ ಸಂಯೋಜಕ ದಿನಕರ ಶೆಟ್ಟಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಸಿಎ ಅಶ್ವತ್‌ ಜೆ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಸಿಎ ಅಕ್ಷತಾ ವಂದಿಸಿದರು. ಕಾಲೇಜಿನ  ಉಪನ್ಯಾಸಕ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article