ವರದಿಗಾರನ ಮೇಲೆ ಹಲ್ಲೆ: ಪ್ರಕರಣ ದಾಖಲು
Friday, August 21, 2026
ಕುಂದಾಪುರ: ಕುಂದಾಪುರದಲ್ಲಿ ಕನ್ನಡ ಪ್ರಭ ಪತ್ರಿಕೆಯ ವರದಿಗಾರ ಶ್ರೀಕಾಂತ್ ಅವರಿಗೆ ಆ.21 ರಂದು ಆಪಾದಿತ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಎಂಬುವರು ಈ ಹಿಂದೆ ಕುಂದಾಪುರ ಸರಕಾರಿ ಆಸ್ಪತ್ರೆಯ ಶಸ್ತ್ರ ಚಿಕಿತ್ಸೆಯ ವೈದ್ಯರು ಒಳರೋಗಿಗಳಿಂದ ಚಿಕಿತ್ಸೆಯ ಸಮಯ ಹಣ ಪಡೆಯುತ್ತಿರುವ ಬಗ್ಗೆ ಪತ್ರಿಕೆಯಲ್ಲಿ ಪ್ರಕಟಿಸಿರುವ ವಿಚಾರದಲ್ಲಿ ದ್ವೇಷಗೊಂಡು ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು, ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.