ಮಲ್ಲೆ ಬಂದರಿನಲ್ಲಿ ಮೀನುಗಾರ ಕಾರ್ಮಿಕನ ಕೊಲೆ
ಮಲ್ಲೆ: ಮಲ್ಪೆ ಬಂದರಿನಲ್ಲಿ ಲಂಗರು ಹಾಕಲಾಗಿದ್ದ ಮೀನುಗಾರಿಕಾ ಬೋಟ್‌ನ ಕ್ಯಾಬಿನ್‌ನಲ್ಲಿ ಮೀನುಗಾರ ಕಾರ್ಮಿಕರಿಬ್ಬರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಚೂರಿ ಇರಿತದಿಂದ ಓರ್ವ ಮೃತಪಟ್ಟಿರುವ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.
ಮೃತನನ್ನು ಚಿಕ್ಕಮಗಳೂರು ಮೂಲದ ಅಭಿಷೇಕ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದ ಎಂಬಾತನನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ರಾತ್ರಿ ಬೋಟ್‌ನಲಗಲೀಯೇ ಗೋವಿಂದ ಹಾಗೂ ಅಭಿಷೇಕ್ ನಡುವೆ ಗಲಾಟೆ ನಡೆದಿತ್ತು. ಇದೇ ವಿಚಾರವಾಗಿ ಮಂಗಳವಾರ ಮುಂಜಾನೆ ಮತ್ತೆ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಗೋವಿಂದ ಅಭಿಷೇಕ್‌ಗೆ ಚೂರಿಯಿಂದ ಇರಿದು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಮಲ್ಪೆ ಪೊಲೀಸ್ ಠಾಣೆಯ ಅನೀಲ್ ಕುಮಾರ್ ನೇತೃತ್ವದ ಸಿಬ್ಬಂದಿ ಆದರ್ಶ ಹಾಗೂ ಕುಬೇರ ಕಾರ್ಯಪ್ರವೃತ್ತರಾಗಿ ಆರೋಪಿಗಾಗಿ ಶೋಧ ಆರಂಭಿಸಿದರು. ಪೊಲೀಸರು ನಡೆಸಿದ ತ್ವರಿತ ಕಾರ್ಯಾಚರಣೆಯಲ್ಲಿ ಆರೋಪಿ ಉಡುಪಿ ರೈಲು ನಿಲ್ದಾಣದ ಮೂಲಕ ಹೈದರಾಬಾದ್ ಅಥವಾ ಮುಂಬೈಗೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.