ಆ.10 ರಿಂದ ಯೋಗಾಸನ ಶಿಬಿರ
Monday, August 3, 2026
ಮಂಗಳೂರು: ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದಲ್ಲಿ ಆ.10 ರಿಂದ ಸಂಜೆ 5 ಗಂಟೆಯಿಂದ ಸಂಜೆ 6.30 ರವರೆಗೆ ಯೋಗಾಸನ ಶಿಬಿರ ನಡೆಯಲಿದೆ.
ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿಯವರ ಶಿಷ್ಯರು ಯೋಗಾಸನ, ಮುದ್ರೆಗಳು, ಕ್ರಿಯೆಗಳು, ಪ್ರಾಣಾಯಾಮ, ಸೂರ್ಯನಮಸ್ಕಾರ, ಧ್ಯಾನ ಮಾಡುವ ವಿಧಾನ ತಿಳಿಸಿಕೊಡುವರು.
ಅಂತರಾಷ್ಟ್ರಿಯ ಯೋಗದಿನಾಚರಣೆಯ ಪೂರ್ವಭಾವಿ ತಯಾರಿಯ ಯೋಗಾಭ್ಯಾಸ ಇದಾಗಿದ್ದು, ಆಸಕ್ತರು ತಮ್ಮ ಹೆಸರುಗಳನ್ನು ಆಶ್ರಮದ ಕಾರ್ಯಾಲಯದಲ್ಲಿ ನೋಂದಾಯಿಸಬಹುದು. ಹೆಚ್ಚಿನ ವಿವರಗಳಿಗಾಗಿ ದೂ.ಸಂ.: 0824-2414412 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.