ಆ.25ಕ್ಕೆ ಮೀಲಾದುನ್ನೆಬಿ ರಜೆಗೆ ಮನವಿ

ಆ.25ಕ್ಕೆ ಮೀಲಾದುನ್ನೆಬಿ ರಜೆಗೆ ಮನವಿ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಆ.25ರಂದು ಮೀಲಾದುನ್ನೆಬಿ ಆಚರಿಸಲಾಗುತ್ತಿದೆ. ಹಾಗಾಗಿ ಸರಕಾರಿ ಸಾರ್ವತ್ರಿಕ ರಜೆಯನ್ನು ಆ.25ರಂದು ನೀಡುವಂತೆ ಮುಸ್ಲಿಂ ಮುಖಂಡರ ನಿಯೋಗವು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹಾಗೂ ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರಿಗೆ ಮನವಿ ಸಲ್ಲಿಸಿದೆ.

ಪ್ರವಾದಿ ಮುಹಮ್ಮದ್ ಮುಸ್ತಫಾ (ಸ)ರ ಜನ್ಮದಿನದ ಪ್ರಯುಕ್ತ ಸರಕಾರಿ ಸಾರ್ವತ್ರಿಕ ರಜೆ ಆ.26ರಂದು ನಿಗದಿಯಾಗಿದೆ. ಆದರೆ ಇಸ್ಲಾಮಿಕ್ ತಿಂಗಳ ಆರಂಭದ ಚಂದ್ರದರ್ಶನದಲ್ಲಿ ವ್ಯತ್ಯಾಸವಾದ ಕಾರಣ ಆ.25ರಂದು ಮೀಲಾದ್ ನಡೆಸಲು ಜಿಲ್ಲೆಯ ಖಾಝಿಗಳು ನಿರ್ಧರಿಸಿದ್ದಾರೆ. 

ನಡೆಯಲಿದ್ದು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆ ಯಲ್ಲಿ ಆ.25ರ ಮಂಗಳವಾರ ಈದ್ ಮಿಲಾದ್ ರಜೆ ನೀಡಲು ಆಗ್ರಹಿಸಲಾಗಿದೆ. 

ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ಮಾಜಿ ಅಧ್ಯಕ್ಷ ಬಿ.ಎ. ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಮಂಗಳೂರು ಕೇಂದ್ರ ಜುಮಾ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷ ಯೆನೆಪೋಯ ಅಬ್ದುಲ್ಲ ಕುಂಞಿ, ಉಳ್ಳಾಲ ದರ್ಗಾ ಅಧ್ಯಕ್ಷ ಹಾಜಿ ಜಿ. ಹನೀಫ್ ಜಂಟಿಯಾಗಿ ಮನವಿ ಸಲ್ಲಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article