ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಆರೋಪಿಗೆ 2.6 ವರ್ಷ ಜೈಲು, 40 ಸಾವಿರ ದಂಡ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಆರೋಪಿಗೆ 2.6 ವರ್ಷ ಜೈಲು, 40 ಸಾವಿರ ದಂಡ


ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಗೆ 2 ವರ್ಷ 6 ತಿಂಗಳ ಜೈಲು ಶಿಕ್ಷೆ ಹಾಗೂ 40 ಸಾವಿರ ದಂಡ ವಿಧಿಸಿ ಮಂಗಳೂರಿನ ಎಫ್‌ಟಿಎಸ್‌ಸಿ-1 ವಿಶೇಷ ನ್ಯಾಯಾಲಯ ಜು.31 ರಂದು ತೀರ್ಪು ನೀಡಿದೆ.

2025ರ ಜೂನ್ 23ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯ ಸಂಬಂಧ ದಾಖಲಾದ ಪ್ರಕರಣದಲ್ಲಿ, ಮಣಿನಾಲ್ಕೂರು ನಿವಾಸಿ ಮೋನಪ್ಪ ನಾಯ್ಕ (52) ವಿರುದ್ಧ ಪೊಲೀಸರು ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಮೋಹನ್ ಜೆ.ಎಸ್. ಅವರು ವಿವಿಧ ಕಲಂಗಳಡಿ ಶಿಕ್ಷೆ ಹಾಗೂ ದಂಡ ವಿಧಿಸಿದ್ದು, ಎಲ್ಲಾ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಾಗಲಿದ್ದು, ಒಟ್ಟು 2 ವರ್ಷ 6 ತಿಂಗಳ ಜೈಲು ಶಿಕ್ಷೆ ಮತ್ತು 40 ಸಾವಿರ ದಂಡ ವಿಧಿಸಲಾಗಿದೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕಿ ಸಹನಾದೇವಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article