ತುಳು ಅಕಾಡೆಮಿಯ ಪುಸ್ತಕಗಳಿಗೆ ಶೇ.50ರ ರಿಯಾಯಿತಿಯಲ್ಲಿ ಮಾರಾಟ
Friday, August 7, 2026
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಪ್ರಕಟಿಸಿರುವ ತುಳು ಪುಸ್ತಕಗಳನ್ನು ಶೇ.50 ರ ರಿಯಾಯಿತಿಯ ದರದಲ್ಲಿ ಮಾರಾಟ ಮಾಡುವ ಸ್ವಾತಂತ್ಯೋತ್ಸವ ತುಳು ಪುಸ್ತಕೋತ್ಸವಕ್ಕೆ ಚಾಲನೆ ನೀಡಲಾಗಿದೆ.
ಸ್ವಾತಂತ್ಯೋತ್ಸವದ ತುಳು ಪುಸ್ತಕೋತ್ಸವನ್ನು ಶುಕ್ರವಾರದಂದು ತುಳುಭವನದ ಅಕಾಡೆಮಿಯ ಗ್ರಂಥಾಲಯದಲ್ಲಿ ದೀಪ ಬೆಳಗಿಸುವ ಮೂಲಕ ಅಕಾಡೆಮಿಯ ಸದಸ್ಯ ಕುಂಬ್ರ ದುರ್ಗಾ ಪ್ರಸಾದ್ ರೈ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ರಿಜಿಸ್ಟ್ರಾರ್ ಪೂರ್ಣಿಮಾ, ಸದಸ್ಯರಾದ ಬೂಬ ಪೂಜಾರಿ ಮಳಲಿ, ಅಕ್ಷಯ ಆರ್. ಶೆಟ್ಟಿ, ಸಂತೋಷ್ ಶೆಟ್ಟಿ ಹಿರಿಯಡ್ಕ ಹಾಗೂ ಅಕಾಡೆಮಿಯ ಮಾಜಿ ಸದಸ್ಯರಾದ ಬೆನೆಟ್ ಜಿ. ಅಮ್ಮನ್ನ ಉಪಸ್ಥಿತರಿದ್ದರು.
ಸ್ವಾತಂತ್ಯೋತ್ಸವದ ಪ್ರಯುಕ್ತ ನಡೆಯುವ ಈ ರಿಯಾಯಿತಿ ದರದ ಮಾರಾಟವು ಆಗಸ್ಟ್ 31 ರ ತನಕ ನಡೆಯಲಿದೆ ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.