ತುಳು ಅಕಾಡೆಮಿಯ ಪುಸ್ತಕಗಳಿಗೆ ಶೇ.50ರ ರಿಯಾಯಿತಿಯಲ್ಲಿ ಮಾರಾಟ
Saturday, August 8, 2026
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಪ್ರಕಟಿಸಿರುವ ತುಳು ಪುಸ್ತಕಗಳನ್ನು ಶೇ.50 ರ ರಿಯಾಯಿತಿಯ ದರದಲ್ಲಿ ಮಾರಾಟ ಮಾಡುವ ಸ್ವಾತಂತ್ಯೋತ್ಸವ ತುಳು ಪುಸ್ತಕೋತ್ಸವಕ್ಕೆ ಚಾಲನೆ ನೀಡಲಾಗಿದೆ.
ಸ್ವಾತಂತ್ಯೋತ್ಸವದ ತುಳು ಪುಸ್ತಕೋತ್ಸವನ್ನು ಶುಕ್ರವಾರದಂದು ತುಳುಭವನದ ಅಕಾಡೆಮಿಯ ಗ್ರಂಥಾಲಯದಲ್ಲಿ ದೀಪ ಬೆಳಗಿಸುವ ಮೂಲಕ ಅಕಾಡೆಮಿಯ ಸದಸ್ಯ ಕುಂಬ್ರ ದುರ್ಗಾ ಪ್ರಸಾದ್ ರೈ ಅವರು ಉದ್ಘಾಟಿಸಿದರು.
ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ರಿಜಿಸ್ಟ್ರಾರ್ ಪೂರ್ಣಿಮಾ, ಸದಸ್ಯರಾದ ಬೂಬ ಪೂಜಾರಿ ಮಳಲಿ, ಅಕ್ಷಯ ಆರ್. ಶೆಟ್ಟಿ, ಸಂತೋಷ್ ಶೆಟ್ಟಿ ಹಿರಿಯಡ್ಕ ಹಾಗೂ ಅಕಾಡೆಮಿಯ ಮಾಜಿ ಸದಸ್ಯರಾದ ಬೆನೆಟ್ ಜಿ. ಅಮ್ಮನ್ನ ಉಪಸ್ಥಿತರಿದ್ದರು.
ಸ್ವಾತಂತ್ಯೋತ್ಸವದ ಪ್ರಯುಕ್ತ ನಡೆಯುವ ಈ ರಿಯಾಯಿತಿ ದರದ ಮಾರಾಟವು ಆಗಸ್ಟ್ 31ರ ತನಕ ನಡೆಯಲಿದೆ ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.