ಉದ್ಯೋಗಾವಕಾಶ: 7 ರಂದು ಸಂದರ್ಶನ
Tuesday, August 4, 2026
ಮಂಗಳೂರು: ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿ ಇರುವ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನವನ್ನು ಆಗಸ್ಟ್ 7 ರಂದು ಪಡೀಲ್ ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಗ್ಗೆ 10 ರಿಂದ 1.30 ರವರೆಗೆ ಆಯೋಜಿಸಲಾಗಿದೆ.
ನೇರ ಸಂದರ್ಶನದಲ್ಲಿ ಯಾವುದೇ ಪದವಿ ಹೊಂದಿರುವ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಮಲಯಾಳಂ/ ಹಿಂದಿ/ ಇಂಗ್ಲಿಷ್ /ತಮಿಳು / ಕನ್ನಡ ಭಾಷೆ ತಿಳಿದಿರಬೇಕು. ಹುದ್ದೆಗಳ ಸಂಖ್ಯೆ 25. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.