ಶಕ್ತಿ ವಿದ್ಯಾ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಶಕ್ತಿ ವಿದ್ಯಾ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ


ಮಂಗಳೂರು: ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.


ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘದ ಮಾಜಿ ಅಧ್ಯಕ್ಷ ಎನ್. ಶರತ್ ಭಂಡಾರಿ ಅವರು ಧ್ವಜಾರೋಹಣವನ್ನು ನೆರವೇರಿಸಿ, ಮಾತನಾಡಿ, ಸ್ವಾತಂತ್ರ್ಯ ನಮಗೆ ಅಷ್ಟು ಸುಲಭದಲ್ಲಿ ಸಿಗಲಿಲ್ಲ. ಸಾಕಷ್ಟು ಜನರ ತ್ಯಾಗ ಬಲಿದಾನದ ಪ್ರತಿಫಲವಾಗಿ ಆಗಸ್ಟ್ 14ರ ಮಧ್ಯ ರಾತ್ರಿ ನಮಗೆ ಸ್ವಾತಂತ್ರ್ಯ ಸಿಕ್ಕಿತು. ಅದನ್ನು ನಾವು ಕಾಪಾಡಿಕೊಂಡು ಹೋಗಬೇಕು. ಸ್ವಾತಂತ್ರ್ಯ ಹೋರಾಟಗಾರರನ್ನು ನಾವು ಸ್ಮರಿಸಿಕೊಳ್ಳಬೇಕು. ಮಕ್ಕಳೇ ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಭಾರತದ ಉತ್ತಮ ಪ್ರಜೆಗಳಾಗಿ, ಸಂವಿಧಾನದಲ್ಲಿ ನೀಡಿದ ನಾಗರೀಕ ಕರ್ತವ್ಯಗಳನ್ನು ನೀವೆಲ್ಲರೂ ಸರಿಯಾಗಿ ಪಾಲಿಸಿರಿ. 20047ರಲ್ಲಿ ನಮ್ಮ ಭಾರತ ಜಗತ್ತಿನ ಶ್ರೇಷ್ಠ ದೇಶ ಆಗಬೇಕು. ಹಾಗಾಗ ಬೇಕಾದರೆ ಇಂದಿನ ಯುವಕರು, ಮಕ್ಕಳು ವ್ಯಸನಗಳಿಗೆ ಬಲಿಯಾಗದೆ, ಸತ್ಸಂಗದಲ್ಲಿ ಬಾಳಿ ದೇಶ ಕಟ್ಟುವಲ್ಲಿ ಕಾರ್ಯ ಪ್ರವೃತ್ತರಾಗಬೇಕು. ತಂದೆ ತಾಯಿಯಯರ ಕನಸನ್ನು ಈಡೇರಿಸುತ್ತ, ದೇಶದ ಉತ್ತಮ ನಾಗರೀಕರಾಗಿ ಬಾಳಿ ಎಂದು ಹೇಳುತ್ತಾ ಮಕ್ಕಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು.


ನಂತರ ಶಾಲಾ ಮಕ್ಕಳಿಂದ ದೇಶಭಕ್ತಿ ಸಾರುವ ಹಾಡು, ನೃತ್ಯ, ನಾಟಕಗಳನ್ನೊಳಗೊಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ದಿನದ ಪ್ರಾಮುಖ್ಯತೆಯನ್ನು ಅಕ್ಷತಾ ವಾಚಿಸಿದರು. ಮತ್ತು ವಿದ್ಯಾರ್ಥಿ ಚಂದ್ರಮೋಹನ್ ಕಣ್ಣು ಮುಚ್ಚಿಕೊಂಡು ವಿವಿಧ ಬಣ್ಣಗಳನ್ನು, ವಿವಿಧ ವಸ್ತುಗಳನ್ನು ಮತ್ತು ವಿವಿಧ ಆಕೃತಿಗಳನ್ನು ಗುರುತಿಸುವ ಮತ್ತು ದೂರವಾಣಿ ಸಂಖ್ಯೆಗಳನ್ನು ಹೇಳುವ ಮೂಲಕ ಗಾಂಧಾರಿ ವಿದ್ಯೆಯನ್ನು ಪ್ರದರ್ಶಿದನು.


ಈ ಸಂದರ್ಭದಲ್ಲಿ ಗಾಂಧಾರಿ ವಿದ್ಯೆಯಲ್ಲಿ ಅತ್ಯುತ್ತಮ ಪ್ರದರ್ಶನ ಮಾಡಿರುದಕ್ಕೊಸ್ಕರ ಕಲಂ ವಲ್ಡ್ ರೆಕಾರ್ಡ್ ಪ್ರಶಸ್ತಿಯನ್ನು ಸ್ವಿಕರಿಸಿದಕ್ಕೋಸ್ಕರ ವಿದ್ಯಾರ್ಥಿಯನ್ನು ವೇದಿಕೆಯಲ್ಲಿ ಅಭಿನಂದಿಸಲಾಯಿತು. 


ಈ ಸಂದರ್ಭದಲ್ಲಿ ಶಕ್ತಿ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಡಾ ಕೆ.ಸಿ. ನಾಕ್, ಶಕ್ತಿ ವಿದ್ಯಾ ಸಂಸ್ಥೆಯ ಟ್ರಸ್ಟಿ ಸಗುಣ ಸಿ. ನಾಕ್, ಶಕ್ತಿ ವಿದ್ಯಾ ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್ ಕೆ., ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಶಕ್ತಿ ರೆಸಿಡೆನ್ಶಿಯಲ್ ಶಾಲಾ ಪ್ರಾಂಶುಪಾಲೆ ಸುರೇಖಾ ಆರ್ ಭಟ್ ಉಪಸ್ಥಿತರಿದ್ದರು. 


ಧೃತಿ ಕಾರ್ಯಕ್ರಮವನ್ನು ನಿರೂಪಿಸಿದರು. ಆದ್ಯ ಸ್ವಾಗತಿಸಿ, ಆದ್ಯ ಆರ್. ವಂದಿಸಿದರು.




Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article