ಕಾಂಗ್ರೆಸ್‌ನಿಂದ ಬಡವರ ಬಿಪಿಎಲ್, ಪಿಂಚಣಿ ಸೌಲಭ್ಯ ರದ್ದು

ಕಾಂಗ್ರೆಸ್‌ನಿಂದ ಬಡವರ ಬಿಪಿಎಲ್, ಪಿಂಚಣಿ ಸೌಲಭ್ಯ ರದ್ದು


ಮಂಗಳೂರು: ಮಂಗಳೂರು ನಗರ ದಕ್ಷಿಣ ಮಂಡಲದ ಕಾರ್ಯಕಾರಣಿ ಸಭೆಯು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ನಡೆಯಿತು.

ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತ ಮಿತಿ ಮೀರಿದೆ. ನಮ್ಮ ಜಿಲ್ಲೆಯಲ್ಲೇ ಸಾವಿರಾರು ಬಡವರ ಬಿಪಿಎಲ್ ಕಾರ್ಡ್ ಗಳು ರದ್ದಾಗಿವೆ. ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನದಂತಹ ಎಲ್ಲಾ ಪಿಂಚಣಿ ಸೌಲಭ್ಯಗಳು ಸ್ಥಗಿತಗೊಂಡಿವೆ. ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಐಸಿಯು ಬೆಡ್ ಸಿಗುತ್ತಿಲ್ಲ. ಬಿಜೆಪಿ ಶಾಸಕರ ಮೇಲೆ ಸುಳ್ಳು ಕೇಸ್ ಹಾಕಲಾಗುತ್ತಿದ್ದು, ಸಂಸತ್ ಆವರಣದಲ್ಲಿ ಪ್ರತಿಭಟನೆ ಹೆಸರಲ್ಲಿ ಕಾಂಗ್ರೆಸ್ಸಿಗರು ಹಿಂದೂ ಧರ್ಮದ ಅವಹೇಳನ ಮಾಡುತ್ತಿದ್ದಾರೆ. ಈ ಎಲ್ಲಾ ಅಟ್ಟಹಾಸಕ್ಕೆ ತಕ್ಕ ಉತ್ತರ ನೀಡುವ ಕಾಲ ಸಮೀಪಿಸುತ್ತಿದೆ ಎಂದರು.

ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು ಅಧ್ಯಕ್ಷತೆ ವಹಿಸಿದ್ದರು.

ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಹಾಗೂ ಲಲ್ಲೇಶ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಪೂರ್ಣಿಮಾ ಹಾಗೂ ಸುಜಿತ್ ಪ್ರತಾಪ್, ಜಿಲ್ಲಾ ಕೋಶಾಧಿಕಾರಿ ಸಂಜಯ್ ಪ್ರಭು, ಪ್ರಮುಖರಾದ ಗಣೇಶ್ ಹೊಸಬೆಟ್ಟು ಸೇರಿದಂತೆ ಮಂಡಲದ ಪದಾಧಿಕಾರಿಗಳು, ನಿಕಟಪೂರ್ವ ಪಾಲಿಕೆ ಸದಸ್ಯರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷರು ಹಾಗೂ ಶಕ್ತಿ ಕೇಂದ್ರಗಳ ಪ್ರಮುಖರು ಮೊದಲಾದವರು ಉಪಸ್ಥಿತರಿದ್ದರು

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article