ದಿನವಿಡೀ ಬಿಟ್ಟುಬಿಟ್ಟು ಸಾಧಾರಣ ಮಳೆ

ದಿನವಿಡೀ ಬಿಟ್ಟುಬಿಟ್ಟು ಸಾಧಾರಣ ಮಳೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾನುವಾರ ದಿನವಿಡೀ ಬಿಟ್ಟುಬಿಟ್ಟು ಸಾಧಾರಣ ಮಳೆಯಾಗಿದೆ. ಬೆಳಗಿನ ಜಾವದಿಂದಲೇ ಮೋಡ ಬಿಸಿಲಿನಿಂದ ಆರಂಭವಾದ ಅಲ್ಪ ಮಳೆ ಸಂಜೆಯ ವೇಳೆಗೆ ಗ್ರಾಮೀಣ ಭಾಗಗಳಲ್ಲಿ ಬಿರುಸು ಪಡೆದುಕೊಂಡಿತು. ಬಹುತೇಕ ಸಮಯ ಸೂರ್ಯನ ಪ್ರಖರ ದರ್ಶನದಿಂದ ವಾತಾವರಣ ಕೆಲವೊಮ್ಮೆ ಬಿಸಿಯೇರುತ್ತಿತ್ತು. ಮುಂಬರುವ ದಿನಗಳಲ್ಲಿ ಮಳೆಯ ತೀವ್ರತೆ ಕೊಂಚ ತಗ್ಗುವ ಲಕ್ಷಣಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಧರ್ಮಸ್ಥಳ, ಚಾರ್ಮಾಡಿ ಘಾಟಿ ಪ್ರದೇಶ, ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ಸೇರಿದಂತೆ ಪಶ್ಚಿಮ ಘಟ್ಟದ ತಳಭಾಗದ ಪ್ರದೇಶಗಳಲ್ಲಿ ಅಲ್ಪ ಮಳೆಯಾಗಿದೆ, ಮಂಗಳುರು ನಗರ ಸುತ್ತಮುತ್ತ ಬಿಸಿಲು ತುಸು ಜಾಸ್ತಿಯಿದ್ದು, ಸಾಧಾರಣ ಮಳೆಯಾಗಿದೆ.

ಭಾನುವಾರ ಬೆಳಗ್ಗಿನ ವರೆಗೆ ಜಿಲ್ಲೆಯಲ್ಲಿ ಒಟ್ಟು 14.1 ಮಿ.ಮೀ ಮಳೆ ದಾಖಲಾಗಿದೆ. ಜಿಲ್ಲೆಯ ಗರಿಷ್ಠ ಮಳೆ ಬೆಳ್ತಂಗಡಿಯಲ್ಲಿ 20.3 ಮಿಮಿ ಮಿ.ಮೀ ಮಳೆಯಾಗಿದೆ. ಗಾಳಿಯ ಚಲನೆಯು ವಾಯವ್ಯದಿಂದ ಆಗ್ನೇಯಕ್ಕೆ ಇರುವುದರಿಂದ ಪಚ್ಚಿಮಘಟ್ದ  ಕೆಳಗಿನ ಪ್ರದೇಶಗಳಲ್ಲಿ ಮಳೆ ಹೆಚ್ಚಿರಬಹುದು ಎಂದು ಹವಾಮಾಣ ಇಲಾಖೆ ಸೂಚನೆ ನೀಡಿದೆ. ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಪಶ್ಚಿಮಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಹಾಗೂ ಸುತ್ತಮುತ್ತ ಒಂದೆರಡು ಮಳೆ ಹೆಚ್ಚಿರುವ ಸಾಧ್ಯತೆ ಇದೆ. ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 24ರ ತನಕ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ನಂತರ ಇಡೀ ದಿನ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಯುರೋಪ್ ಖಂಡದ ಹಲವೆಡೆ ಈಗಾಗಲೇ ಉಷ್ಣ ಮಾರುತಗಳು ಬೀಸುತ್ತಿರುವುದರಿಂದ ಸಾಮಾನ್ಯ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಕೆಲವು ದೇಶಗಳಲ್ಲಿ ತಾಪಮಾನ 37ಡಿ.ಸೆ ಗಿಂತಲೂ ಅಧಿಕವಾಗಿದೆ. ಮಧ್ಯಮ ಸ್ತರದಲ್ಲಿ ಉತ್ತರ ಪಶ್ಚಿಮ ಏಷ್ಯಾ ಹಾಗೂ ಯುರೋಪ್ ಕಡೆಯಿಂದ ಅರಬ್ಬಿ ಸಮುದ್ರದ ಕಡೆಗೆ ಶುಶ್ಕ ಗಾಳಿಯ ಬೀಸುವಿಕೆ ಪ್ರಭಲಗೊಳ್ಳುತ್ತಿದೆ. (ಜೂನ್ ಮೂರನೇ ವಾರದಲ್ಲಿ ಇದ್ದಂತಹ ಪರಿಸ್ಥಿತಿ). ಇದರಿಂದ ಮುಂಗಾರು ದುರ್ಬಲಗೊಂಡಂತೆ ತೋರುತ್ತಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article