ಬಾರ್‌ಗಳ ಮೇಲೆ ದಿಢೀರ್ ದಾಳಿ
Saturday, August 8, 2026
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮದ್ಯದೊಂದಿಗೆ ಆಹಾರ ಪೂರೈಸುವ ಬಾರ್‌ಗಳ ಮೇಲೆ ಬುಧವಾರ ರಾತ್ರಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಬಾರ್‌ಗೆ ಆಗಮಿಸಿದವರ ಗುರುತಿನ ಚೀಟಿ ತಪಾಸಣೆ ನಡೆಸಲಾಯಿತು.
ಅಪ್ರಾಪ್ತ ವಯಸ್ಕರಿಗೆ ಮದ್ಯ ಪೂರೈಸದಂತೆ ಸನ್ನದುದಾರರಿಗೆ ಸೂಚನೆ ನೀಡಲಾಯಿತು. ಮದ್ಯ ಪೂರೈಸಿದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಬಕಾರಿ ಅಧಿಕಾರಿಗಳು ಎಚ್ಚರಿಸಿದರು.