ಅಪ್ರಾಪ್ತ ಬಾಲಕಿಗೆ ಅತ್ಯಾತಾರ: ನ್ಯಾಯಾಂಗ ಬಂಧನ
Friday, August 21, 2026
ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ರಿಕ್ಷಾ ಚಾಲಕ ಪ್ರತಿನಿತ್ಯ ಅನುಚಿತವಾಗಿ ವರ್ತಿಸುತ್ತಿದ್ದು, ಅದನ್ನು ವಿರೋಧಿಸಿದ ಬಾಲಕಿಗೆ ಜೀವಬೆದರಿಕೆ ಹಾಕಿದ್ದು, ಆ.13 ರಂದು ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ರಿಕ್ಷಾ ಚಾಲಕ ಬೆಳ್ತಂಗಡಿ ವೇಣೂರು ನಿವಾಸಿ ಜಮಾಲುದ್ದೀನ್ ಎಂದು ಗುರುತಿಸಲಾಗಿದೆ.
ಪ್ರಕರಣದ ವಿವರ:
14 ವರ್ಷದ ಬಾಲಕಿಯನ್ನು ಪ್ರತಿನಿತ್ಯ ರಿಕ್ಷಾದಲ್ಲಿ ಕರೆದುಕೊಂಡು ಹೋಗುತ್ತಿದ್ದು, ಅನುಚಿತವಾಗಿ ವರ್ತಿಸುತ್ತಿದ್ದು, ಆ.13 ರಂದು ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆತನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.