ಕುಂಬಾರ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಡಾ. ಶ್ರೀನಿವಾಸ್ ವೇಲು

ಕುಂಬಾರ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಡಾ. ಶ್ರೀನಿವಾಸ್ ವೇಲು


ಮಂಗಳೂರು: ಕುಂಬಾರ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬದ್ಧವಾಗಿದ್ದು, ಸಮಾಜದ ಅಭಿವೃದ್ಧಿಗಾಗಿ ದೊರೆಯುವ ವಿವಿಧ ಯೋಜನೆಗಳು, ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಾಗುವುದು ಎಂದು ರಾಜ್ಯ ಕುಂಬಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶ್ರೀನಿವಾಸ್ ವೇಲು ಹೇಳಿದ್ದಾರೆ.


ಶನಿವಾರ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ಕುಂಬಾರ ಸಮಾಜದ ಕಾಂಗ್ರೆಸ್ ಕಾರ್ಯಕರ್ತರ ಅಹವಾಲು ಸ್ವೀಕರಿಸಿ ಬಳಿಕ ಅವರು ಮಾತನಾಡುತ್ತಿದ್ದರು.


ಕುಂಬಾರ ಸಮಾಜದ ಸಮಸ್ಯೆ ಮತ್ತು ಬೇಡಿಕೆಗಳನ್ನು ಹಂತ ಹಂತವಾಗಿ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಮಾಜದ ನಿಷ್ಠಾವಂತ ಕಾರ್ಯಕರ್ತರಿಗೆ ಪಕ್ಷದಲ್ಲಿ ಸೂಕ್ತ ಅವಕಾಶಗಳು ದೊರೆಯಲಿದೆ. ಸಮಾಜದ ಅಭಿವೃದ್ಧಿ ಮತ್ತು ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಸದಾಶಿವ ಬಂಗೇರ ಬಂಟ್ವಾಳ, ಸುಧಾಕರ್ ಕುಲಾಲ್, ಮಹೇಶ್ ಕೋಡಿಕಲ್, ಶ್ಈನಿವಾಸ್ ಬೊಂದೇಲ್, ಸದಾನಂದ, ಸದಾಶಿವ ಕುಲಾಕ್ ಪಾಂಡೇಶ್ವರ, ಜಯಶೀಲ ಅಡ್ಯಂತಯ, ಚಂದ್ರಕಲಾ ಜೋಗಿ, ನ್ಯಾನ್ಸಿ ನೊರೊನ್ಹ ಮತ್ತಿತರರು ಉಪಸ್ಥಿತರಿದ್ದರು. ತೇಜಸ್ವಿ ರಾಜ್ ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article