‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ
ಎಸ್‌ಸಿಡಿಸಿಸಿ ಬ್ಯಾಂಕ್ ಬೆಳೆಯಲು ಮೊಳಹಳ್ಳಿ ಕಾರಣರಾದವರು: ಡಾ. ಎಂ. ಎನ್. ರಾಜೇಂದ್ರ ಕುಮಾರ್
ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯ ಕಿರಿಯ ನಿರೀಕ್ಷಕ ಹಾಗೂ ಪತ್ರಿಕೋದ್ಯಮದಲ್ಲಿ ಕ್ರೀಡಾ ಬರಹಗಾರರಾಗಿ ಸುಮಾರು 35 ವರ್ಷಗಳಿಂದ ಗುರುತಿಸಿಕೊಂಡಿರುವ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರು ರಚಿಸಿರುವ ‘ತ್ಯಾಗಮಯಿ ಮೊಳಹಳ್ಳಿ’ ಪುಸ್ತಕವನ್ನು ನಗರದ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸೋಮವಾರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಮೊಳಹಳ್ಳಿ ಶಿವರಾವ್ ಅವರು ಎಸ್‌ಸಿಡಿಸಿಸಿ ಬ್ಯಾಂಕ್ ಬೆಳೆಯಲು ಕಾರಣರಾದವರು. ಟೌನ್‌ಬ್ಯಾಂಕ್ ಸ್ಥಾಪಕರು. ಅಂದಿನ ದಿನಗಳಲ್ಲಿ ಎತ್ತಿನಗಾಡಿಯಲ್ಲಿ ಸಂಚರಿಸಿ ಸಹಕಾರಿ ಕ್ಷೇತ್ರವನ್ನು ಬೆಳೆಸಿದವರು. ಅವರಿಂದ ಜಿಲ್ಲೆಯ ಸಹಕಾರಿ ಕ್ಷೇತ್ರ ಬೆಳೆದಿದೆ. 60 ವರ್ಷಗಳ ಕಾಲ ಅವರು ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಕುಂದಾಪುರದ ಮೊಳಹಳ್ಳಿಯಲ್ಲಿ ಹುಟ್ಟಿದರೂ ಅವರ ಕಾರ್ಯಕ್ಷೇತ್ರ ಪುತ್ತೂರು ಆಗಿತ್ತು. ವಕೀಲರಾಗಿದ್ದರೂ ಅವರು ಸಹಕಾರಿ ಕ್ಷೇತ್ರವನ್ನು ಬೆಳೆಸಿದ್ದಾರೆ ಎಂದು ವಿವರಿಸಿದರು.
ವಿವಿಧ ಪತ್ರಿಕೆಗಳಲ್ಲಿ 4500ಕ್ಕೂ ಹೆಚ್ಚು ಲೇಖನಗಳನ್ನು ಬರೆದು ಜಗದೀಶ್ಚಂದ್ರ ಅಂಚನ್ ಅವರು ಕ್ರೀಡೆಗೆ ಮಹತ್ವ ನೀಡಿದ್ದಾರೆ. ಇದೀಗ ಮೊಳಹಳ್ಳಿ ಅವರ ಕುರಿತಾಗಿ ಪುಸ್ತಕ ಬರೆಯುವ ಮೂಲಕ ಅವರು ವಿವಿಧ ಕ್ಷೇತ್ರದಲ್ಲಿ ಮಾಡಿದ ಸಾಧನೆಗಳನ್ನು ದಾಖಲಿಸಿದ್ದಾರೆ ಡಾ.ಎಂ.ಎನ್. ರಾಜೇಂದ್ರಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು.
ದ.ಕ. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಿರ್ದೇಶಕ ಅಶೋಕ್‌ಕುಮಾರ್ ಶೆಟ್ಟಿ, ಸಿಇಒ ಗೋಪಾಲಕೃಷ್ಣ ಭಟ್, ನಬಾರ್ಡ್ ಸಿಜಿಎಂ ಸಂಗೀತಾ ಕರ್ತಾ, ದ.ಕ. ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್.ಎನ್., ಸಹಾಯಕ ನಿಬಂಧಕ ಸುಽರ್‌ಕುಮಾರ್, ಎಸ್‌ಸಿಡಿಸಿಸಿ ಬ್ಯಾಂಕ್ ಮಹಾಪ್ರಬಂಧಕ, ಸುನೀಲ್‌ಕುಮಾರ್ ಹೊಳ್ಳ, ಕೃತಿಯ ಲೇಖಕ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಉಪಸ್ಥಿತರಿದ್ದರು.
ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.