ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಮಾತೃ ವಿಯೋಗ
Sunday, August 9, 2026
ಮಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ತಾಯಿ ಎ. ರತ್ನಕಾಂತಿ ಶೆಟ್ಟಿ (93) ಅವರು ಆ.9 ರಂದು ಮಂಗಳೂರಿನ ಕದ್ರಿಯ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ನಾಲ್ವರು ಪುತ್ರರಾದ ಗುರುಕಿರಣ್ ಶೆಟ್ಟಿ, ಡಾ. ಶಿವಶರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಅವರನ್ನು ಅಗಲಿದ್ದಾರೆ.
ಮಂಗಳೂರಿನ ಹಂಪನಕಟ್ಟೆಯ ಆಗಿನ ಸರಕಾರಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದ ಅವರು ಬಳಿಕ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಉಪನಿರ್ದೇಶಕಿಯಾಗಿ ಬೆಂಗಳೂರಿನಲ್ಲಿ ಕೆಲಸ ಮಾಡಿದ್ದರು. ಆ ನಂತರ ಪ್ರಾದೇಶಿಕ ನಿರ್ದೇಶಕಿಯಾಗಿ ಮಂಗಳೂರಿಗೆ ವರ್ಗಾವಣೆಗೊಂಡು ಕೆಲಸ ಮಾಡಿದ್ದರು. ಪ್ರೇಮಕಾಂತಿ ಕಾಂತಿ ಎಜ್ಯುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷೆ, ಶ್ರೀ ರಾಮಕೃಷ್ಣ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕಿಯೂ ಆಗಿದ್ದರು.
ರಾಜಕೀಯ ಹಾಗೂ ತುಳು ಚಿತ್ರರಂಗದ ವಿವಿಧ ಗಣ್ಯರು ಮೃತರ ಅಂತಿಮ ದರ್ಶನ ಪಡೆದರು.