ಸಂಚಾರ ನಿಯಮ ಉಲ್ಲಂಘನೆ: ದಂಡ

ಸಂಚಾರ ನಿಯಮ ಉಲ್ಲಂಘನೆ: ದಂಡ


ಮಂಗಳೂರು: ವಾಹನದ ಚಾಲನೆಗೆ ಅಡ್ಡಿಯಾಗುವಂತೆ ಗ್ಲಾಸ್‌ಗಳಿಗೆ ಸ್ಟಿಕ್ಕರ್ ಅಳವಡಿಸಿ, ವಾಹನದ ನೋಂದಣಿ ಸಂಖ್ಯೆ ಮರೆಮಾಚುವಂತೆ ಸ್ಟಿಕ್ಕರ್ ಅಳವಡಿಸುವ ಮೂಲಕ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನಗಳಿಗೆ ಪುತ್ತೂರು ಸಂಚಾರ ಠಾಣಾ ಪೊಲೀಸರು ದಂಡ ವಿಧಿಸಿದ್ದಾರೆ.

ಸಾರ್ವಜನಿಕರು ಯಾವುದೇ ಉತ್ಸವ, ಹಬ್ಬ ಹರಿದಿನಗಳು ಹಾಗೂ ಯಾವುದೇ ಕಾರ್ಯಕ್ರಮದ ನೆಪದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article