ದಿನವಿಡೀ ಪ್ರಖರ ಬಿಸಿಲು ಸಹಿತ ಸಂಜೆ ಸಾಧಾರಣ ಮಳೆ

ದಿನವಿಡೀ ಪ್ರಖರ ಬಿಸಿಲು ಸಹಿತ ಸಂಜೆ ಸಾಧಾರಣ ಮಳೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶನಿವಾರ ದಿನವಿಡೀ ಪ್ರಖರ ಬಿಸಿಲು ಸಹಿತ ಸಂಜೆ ಸಾಧಾರಣ ಮಳೆಯಾಗಿದೆ. ಬೆಳಗಿನ ಜಾವ ಮೋಡ ಮತ್ತು ಬಿಸಿಲಿನಿಂದ ಆರಂಭವಾದ ವಾತಾವರಣ, ಸಂಜೆಯ ವೇಳೆಗೆ ಗ್ರಾಮೀಣ ಭಾಗಗಳಲ್ಲಿ ಬಿರುಸು ಪಡೆದುಕೊಂಡಿತು. ಸೂರ್ಯನ ಪ್ರಖರ ದರ್ಶನದಿಂದ ಬಿಸಿಲು ಹೆಚ್ಚಿದ್ದು, ಮುಂಬರುವ ದಿನಗಳಲ್ಲಿ ಮಳೆಯ ತೀವ್ರತೆ ಕೊಂಚ ತಗ್ಗುವ ಲಕ್ಷಣಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆದರೆ ಮೋಡದ ಚಲನೆಯು ವಾಯವ್ಯದಿಂದ ಆಗ್ನೇಯಕ್ಕೆ ಇರುವುದರಿಂದ ಸುಳ್ಯ ತಾಲ್ಲೂಕು ಹಾಗೂ ಕಡಬ ತಾಲೂಕುಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಸಾಧ್ಯತೆಗಳಿವೆ. ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ಜೊತೆಗೆ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಶನಿವಾರ ಬೆಳಗಿನವರೆಗೆ ಜಿಲ್ಲೆಯಲ್ಲಿ ಸರಾಸರಿ 20.6 ಮಿ.ಮೀ ಮಳೆ ದಾಖಲಾಗಿದ್ದು, ಕಡಬದಲ್ಲಿ ಗರಿಷ್ಠ 31.3 ಮಿ.ಮೀ ಮಳೆಯಾಗಿದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ದಿನದಲ್ಲಿ ಒಂದೆರಡು ಮಳೆ ಮುಂದುವರಿಯುವ ಲಕ್ಷಣಗಳಿವೆ. ಆಗಸ್ಟ್ 31ರ ತನಕ ಬಿಸಿ ಮಾತಾವರಣ ಹೆಚ್ಚಿರುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸೆಪ್ಟೆಂಬರ್ 1-2ರ ವೇಳೆ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮ ಕರಾವಳಿ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article