ನಾಳೆ ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ

ನಾಳೆ ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ

ಮಂಗಳೂರು: ಸಹಕಾರವನ್ನು ಜೀವನದ ಧೈಯವನ್ನಾಗಿ, ಜನಸೇವೆಯನ್ನು ಜೀವನದ ಪರಮ ಗುರಿಯನ್ನಾಗಿ. ತ್ಯಾಗವನ್ನು ಬದುಕಿನ ಮಾರ್ಗವನ್ನಾಗಿ ಸ್ವೀಕರಿಸಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಜನರ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಏಳಿಗೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು, ಸಹಕಾರದ ಮೂಲಕ ಸಮಾಜದ ಸರ್ವತೋಮುಖ ಅಭಿವೃದ್ಧಿಯ ಕನಸು ಕಂಡ ಮಹಾನ್ ಚೇತನ, ಸಹಕಾರ ರಂಗದ ಪಿತಾಮಹ ‘ಮೊಳಹಳ್ಳಿ ಶಿವರಾವ್’ ಅಗ್ರಗಣ್ಯರು.

ಕೀರ್ತಿಶೇಷ ಮೊಳಹಳ್ಳಿ ಶಿವರಾವ್ ಅವರ ಬದುಕು ಹಾಗೂ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿದ ಸಾರ್ಥಕ ಸಮಾಜಮುಖಿ ಸೇವೆಯು ಸದಾ ಸ್ಮರಣೀಯ. ಇಂತಹ ಅಪೂರ್ವ ವ್ಯಕ್ತಿತ್ವದ ಧ್ಯೋತಕವಾಗಿ ‘ತ್ಯಾಗಮಯಿ ಮೊಳಹಳ್ಳಿ’ ಕೃತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಆಗಸ್ಟ್ 3ರಂದು ಪೂರ್ವಾಹ್ನ 11.30ಗಂಟೆಗೆ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಬಿಡುಗಡೆ ಗೊಳಿಸಲಿರುವರು.

ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯ ಕಿರಿಯ ನಿರೀಕ್ಷಕರು ಹಾಗೂ ಪತ್ರಿಕೋದ್ಯಮದಲ್ಲಿ ಕ್ರೀಡಾ ಬರಹಗಾರರಾಗಿ ಸುಮಾರು 35 ವರ್ಷಗಳಿಂದ ಗುರುತಿಸಿಕೊಂಡಿರುವ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರು ‘ತ್ಯಾಗಮಯಿ ಮೊಳಹಳ್ಳಿ’ ಕೃತಿಯ ಲೇಖಕರಾಗಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article