ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಪ್ರಚಾರ: ಪ್ರಕರಣ ದಾಖಲು
Tuesday, August 25, 2026
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರ ಶಾಂತಿ ಸುವ್ಯವಸ್ಥೆ ಕದಡುವಂತಹ ಹಾಗೂ ಪ್ರಚೋದನಕಾರಿ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ್ದ ಮಂಜುನಾಥ್ ಎಂಬಾತನ ಮೇಲೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಟ್ಸ್‌ಆಪ್‌ನಲ್ಲಿ ಮಂಜುನಾಥ್ ಎಂಬ ಹೆಸರಿನ ಖಾತೆಯನ್ನು ಹೊಂದಿರುವ ವ್ಯಕ್ತಿಯು, ವಾಟ್ಸಾಪ್ ಮೂಲಕ ರಾಜಕೀಯ ಪಕ್ಷವೊಂದರ ಹೆಸರಿನಲ್ಲಿ ಆ.26 ರಂದು ಪುತ್ತೂರು ಬಂದ್ ನಡೆಸಲು ಸವಾಲು ಹಾಕುವಂತಹ ಪ್ರಚೋದನಕಾರಿ ಹಾಗೂ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕದಡುವಂತಹ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿರುವುದು ಕಂಡುಬಂದಿದ್ದು, ಈತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.