ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ: ನಾಳೆ ಗುಲಾಬಿ ಬೆಳಕಿನಲ್ಲಿ ಕಂಗೊಳಿಸಲಿದೆ ಡಿ.ಸಿ. ಕಚೇರಿ

ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ: ನಾಳೆ ಗುಲಾಬಿ ಬೆಳಕಿನಲ್ಲಿ ಕಂಗೊಳಿಸಲಿದೆ ಡಿ.ಸಿ. ಕಚೇರಿ

ಮಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮ. ಈ ಸಂಭ್ರಮದ ಸವಿನೆನಪಿಗಾಗಿ  ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ, ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನ ಪಡೀಲ್ನಲ್ಲಿರುವ ದಕ್ಷಿಣ ಕನ್ನಡ  ಜಿಲ್ಲಾಧಿಕಾರಿ ಕಚೇರಿ ಕಟ್ಟಡ, ಬೆಳಗಾವಿ ಕಿತ್ತೂರು ಚೆನ್ನಮ್ಮ ವೃತ್ತಗಳು ಆ.30 ಸಂಜೆ 6 ರಿಂದ ರಾತ್ರಿ 10 ರವರೆಗೆ ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಈ ವಿದ್ಯುದ್ದೀಪಾಲಂಕಾರ ಆಯೋಜಿಸುತ್ತಿದೆ.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ರೂ.2 ಸಾವಿರ ನೀಡುವ ಮೂಲಕ ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ನೆರವಾಗಿರುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬಂದು  ಆ.30ಕ್ಕೆ  ಮೂರು ವರ್ಷಗಳನ್ನು ಪೂರೈಸಲಿದೆ.

ಸರ್ಕಾರವು ಗೃಹಲಕ್ಷ್ಮೀ ಯೋಜನೆ ಮೂರು ವರ್ಷಗಳನ್ನು ಪೂರೈಸುತ್ತಿರುವ ಈ ಸಂದರ್ಭದಲ್ಲಿ ಮಹಿಳೆಯರ ಹೆಮ್ಮೆಯ ಸಂಕೇತವೆಂದು ಗುರುತಿಸಿರುವ ಗುಲಾಬಿ  ಬಣ್ಣದ ಬೆಳಕಿನ ವ್ಯವಸ್ಥೆಯನ್ನು ಮಾಡಲಾಗಿದೆ. ಇದುವರೆಗೂ ಈ ಯೋಜನೆಯಡಿ 1.20 ಕೋಟಿ ಫಲಾನುಭವಿಗಳ ಖಾತೆಗೆ 76500 ಕೋಟಿಗೂ  ಹೆಚ್ಚು ಹಣ ಪಾವತಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article