ಕಾನ್ಸ್‌ಟೇಬಲ್ ಪರೀಕ್ಷೆ: ಪರಿಶೀಲನೆ
Saturday, August 1, 2026
ಮಂಗಳೂರು: ಪೋಲಿಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಪರೀಕ್ಷೆ ಭಾನುವಾರ ನಡೆಯಲಿದ್ದು, ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಶನಿವಾರ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಂಡಿರುವ ಅಗತ್ಯ ಸಿದ್ಧತೆಗಳನ್ನು ವೀಕ್ಷಿಸಿದ ಅವರು ಸಲಹೆ ಸೂಚನೆಗಳನ್ನು ನೀಡಿದರು. ಡಿಸಿಪಿ ಮಿಥುನ್ ಹೆಚ್.ಎನ್ ಹಾಗೂ ಹಿರಿಯ ಪೋಲಿಸ್ ಅಧಿಕಾರಿಗಳು ಉಪಸ್ಥಿತರಿದ್ದರು.