ಪೊಲೀಸ್ ಆಯುಕ್ತರ ಮೊಹರು ದುರ್ಬಳಕೆ ಆರೋಪ: ಮಹಿಳಾ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

ಪೊಲೀಸ್ ಆಯುಕ್ತರ ಮೊಹರು ದುರ್ಬಳಕೆ ಆರೋಪ: ಮಹಿಳಾ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಪೊಲೀಸ್ ಆಯುಕ್ತರ ಕಚೇರಿಯ ಮೊಹರು ದುರ್ಬಳಕೆ ಮಾಡಿ ವೈದ್ಯಕೀಯ ವೆಚ್ಚದ ಮರುಪಾವತಿಗೆ ಸಂಬಂಧಿಸಿದ ದಾಖಲೆಗಳಲ್ಲಿ ಅಕ್ರಮ ನಡೆಸಿದ ಆರೋಪದಡಿ ಮಹಿಳಾ ಸಿಬ್ಬಂದಿಯೊಬ್ಬರ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರ ಪೊಲೀಸ್ ಆಯುಕ್ತರ ಕಚೇರಿಯ ಲೆಕ್ಕ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯಶಸ್ವಿನಿ ಎಸ್.ಟಿ. ವಿರುದ್ಧ ಅಕೌಂಟ್ ಸೂಪರಿಂಟೆಂಡೆಂಟ್ ವಂಡಾಲ್ಕರ್ ಅವರು ದೂರು ನೀಡಿದ್ದಾರೆ.

ದೂರಿನ ಪ್ರಕಾರ, ತಮ್ಮ ಪತಿಯ ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದ ವೈದ್ಯಕೀಯ ವೆಚ್ಚದ ಮರುಪಾವತಿಗಾಗಿ ಸಲ್ಲಿಸಿದ್ದ ಬಿಲ್‌ಗಳಲ್ಲಿ ನಿಗದಿತ ಮೊತ್ತಕ್ಕಿಂತ ಹೆಚ್ಚಿನ ಹಣವನ್ನು ಮರುಪಾವತಿಗೆ ಕೋರಲಾಗಿದೆ ಎಂದು ಆರೋಪಿಸಲಾಗಿದೆ.

15,398 ಮೊತ್ತದ ಬಿಲ್‌ಗೆ 1,95,243 ಹಾಗೂ 65,831 ಮೊತ್ತದ ಮತ್ತೊಂದು ಬಿಲ್‌ಗೂ 1,95,243 ಮರುಪಾವತಿಗೆ ಕೋರಲಾಗಿದೆ ಎನ್ನಲಾಗಿದೆ. ಒಟ್ಟು 81,229 ಮೊತ್ತದ ಬಿಲ್‌ಗಳಿಗೆ 4,81,488 ಮರುಪಾವತಿಗೆ ಕೋರಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದಲ್ಲದೆ, ವೈದ್ಯಕೀಯ ಬಿಲ್‌ಗಳ ಮಂಜೂರಾತಿಗೆ ಸಲ್ಲಿಸಿದ ದಾಖಲೆಗಳಲ್ಲಿ `For Commissioner of Police, Mangaluru' ಎಂಬ ಪೊಲೀಸ್ ಆಯುಕ್ತರ ಕಚೇರಿಯ ಮೊಹರನ್ನು ಬಳಸಿಕೊಂಡು ಸಹಿ ದುರ್ಬಳಕೆ ಮಾಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article