ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದಿಂದ ಕ್ವಿಟ್ ಇಂಡಿಯಾ ದಿನಾಚರಣೆ
Sunday, August 9, 2026
ಮಂಗಳೂರು: ಮಂಗಳೂರು ಟಾಗೋರ್ ಪಾರ್ಕ್‌ನಲ್ಲಿರುವ ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನ ಸಂಸ್ಥೆಯವರು ಆಗಸ್ಟ್ 9 ರಂದು ಕ್ವಿಟ್ ಇಂಡಿಯಾ ದಿನಾಚರಣೆಯನ್ನು ಟಾಗೋರ್ ಪಾರ್ಕನಲ್ಲಿ ಆಚರಿಸಿದರು.
ಮಂಗಳೂರು ಮಹಾನಗರ ಪಾಲಿಕೆಯ ನಿಕಟ ಪೂರ್ವ ಕಾರ್ಪೊರೇಟರ್ ಎಸಿ ವಿನಯರಾಜ್ ಅವರು ಧ್ವಜಾರೋಹಣ ನೆರವೇರಿಸಿದರು.
ತರುವಾಯ ನಡೆದ ಸಭಾ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಗಾಂಧಿ ಪ್ರತಿಮೆಗೆ ಮಾಲಾರ್ಪಣೆಗೆ ಗೈದು ಗಾಂಧೀಜಿಯವರ ಆದರ್ಶಗಳನ್ನು ಪಾಲಿಸುವಂತೆ ಕಾರ್ಪೊರೇಟರ್ ವಿದ್ಯಾರ್ಥಿಗಳಲ್ಲಿ ಕೇಳಿಕೊಂಡರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ವಿಷಯ ಸಂಬಂಧಿತ ಸ್ಪರ್ಧೆಗಳನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಗಾಂಧೀಜಿಯವರ ವಿಚಾರಧಾರೆಯ ಹಲವಾರು ಅಂಶಗಳು ವಿದ್ಯಾರ್ಥಿಗಳಿಂದ ಪ್ರಸ್ತುತಪಡಿಸಲ್ಪಟ್ಟಿತು.
ಪ್ರತಿಷ್ಠಾನದ ಉಪಾಧ್ಯಕ್ಷ ಪ್ರಭಾಕರ ಶ್ರೀಯಾನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಡಾ. ಇಸ್ಮಾಯಿಲ್ ಎನ್ ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಕಲ್ಲೂರು ನಾಗೇಶ್ ಕಾರ್ಯಕ್ರಮ ನಿರ್ವಹಿಸಿ, ಎನ್.ಜಿ. ಮೋಹನ್ ವಂದಿಸಿದರು.