ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ: ಬಂಧನ

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ: ಬಂಧನ


ಮಂಗಳೂರು: ಅಪ್ರಾಪ್ತ ಬಾಲಕನಿಗೆ ಬಸ್‌ನಲ್ಲಿ ಅನುಚಿತವಾಗಿ ವರ್ತಿಸಿ, ಬಾಲಕನ ಮನೆಗೆ ಬಂದು ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಒಡ್ಡಿದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ವಿಟ್ಲ ಕೊಂಡಗಾಯಿ ನಿವಾಸಿ ಉಮೇಶ್ (53) ಎಂದು ಗುರುತಿಸಲಾಗಿದೆ.

ಆ.15 ರಂದು ಅಪ್ರಾಪ್ತ ಬಾಲಕ ಅಳಿಕೆಯಿಂದ ಪುತ್ತೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಬಾಲಕನ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯು ಕೂತು ಪ್ರಯಾಣಿಸುತ್ತಿರುವಾಗ ಬಾಲಕನೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಮಾತ್ರವಲ್ಲ ಬಾಲಕನು ತನ್ನ ಮನೆಗೆ ಹೋಗುತ್ತಿದ್ದಾಗ ಆ ವ್ಯಕ್ತಿಯು ಬಾಲಕನ ಮನೆಗೆ ಬಂದು ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಒಡ್ಡಿರುತ್ತಾನೆ ಎಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article