ಕಡಿಮೆ ಅಂಕ: ಬಾಲಕ ಆತ್ಮಹತ್ಯೆ

ಕಡಿಮೆ ಅಂಕ: ಬಾಲಕ ಆತ್ಮಹತ್ಯೆ

ಮಂಗಳೂರು: ಕಡಿಮೆ ಅಂಕ ಬಂದುದರಿಂದ ಮನನೊಂದು ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.30 ರಂದು ಬೆಳ್ತಂಗಡಿಯ ಬಂದಾರು ಗ್ರಾಮದ ಬೈಪಾಡಿ ಸಮೀಪದ ಕುರಿಯಾಳ ಎಂಬಲ್ಲಿ ನಡೆದಿದೆ.

ಮೃತಪಟ್ಟ ಬಾಲಕನನ್ನು ಭರತ್ ಗೌಡ ಅವರ ಪುತ್ರ ಶವಣ್ ಬಿ.ಕೆ. (14) ಎಂದು ಗುರುತಿಸಲಾಗಿದೆ.

ಬಾಲಕ ಬೆಳ್ತಂಗಡಿ ನಗರದ ಹಳೆಕೋಟೆಯಲ್ಲಿರುವ ವಾಣಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದು, ಆ.29 ರಂದು ಶಾಲೆಯಲ್ಲಿ ಪೋಷಕರ ಸಭೆ ವೇಳೆ ಕಡಿಮೆ ಅಂಕ ಬಂದಿರುವ ಬಗ್ಗೆ ಶಿಕ್ಷಕರು ಪೋಷಕರಿಗೆ ತಿಳಿಸಿದ್ದರಿಂದ ನೊಂದುಕೊಂಡಿದ್ದು, ಅಂದು ಸಂಜೆ ಹುಟ್ಟುಹಬ್ಬವನ್ನೂ ಆಚರಿಸಿಕೊಂಡಿದ್ದ. ಬಾಲಕ ಆ.30 ರ ಬೆಳಗ್ಗೆ 11 ಗಂಟೆಗೆ ಮನೆಯ ಮೇಲ್ಛಾವಣಿಯ ಕೋಣೆಯಲ್ಲಿ ವೇಲ್‌ನಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ಬಾಲಕ ತಂದೆ-ತಾಯಿ, ಸಹೋದರಿ ಮತ್ತು ಬಂಧು ಬಳಗವನ್ನು ಅಗಲಿದ್ದಾನೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article