ತಲೆಮೆರೆಸಿಕೊಂಡಿದ್ದ ಆರೋಪಿಯ ಬಂಧನ
Saturday, August 29, 2026
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ಕಳೆದ ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮುಕಚೇರಿ ಸಮೀಪದ ಹಿಲರಿಯ ನಗರ ನಿವಾಸಿ ಮುವಾಝ್ (45) ಬಂಧಿತ ಆರೋಪಿ. ಈತ ಕೇರಳದ ಇರಿಕ್ಕೂರು ಎಂಬಲ್ಲಿ ವಾಸವಾಗಿದ್ದ.
ಈತನ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮೆರೆಸಿಕೊಂಡಿದ್ದ ಈತನ ವಿರುದ್ಧ ನ್ಯಾಯಾಲಯವು ಎಲ್ ಪಿ ಸಿ ವಾರೆಂಟ್ ಹೊರಡಿಸಿತ್ತು.ಈತನನ್ನು ಮಂಗಳೂರು ಪೂರ್ವ ಪೊಲೀಸ್ ಠಾಣಾ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.