ಮಂಗಳೂರು ನಗರ ಬ್ಲಾಕ್ ವಕ್ತಾರ ಲಕ್ಷ್ಮಣ್ ಶೆಟ್ಟಿ ನಿಧನ: ಜಿಲ್ಲಾ ಕಾಂಗ್ರೆಸ್ ಸಮಿತಿ ಸಂತಾಪ

ಮಂಗಳೂರು ನಗರ ಬ್ಲಾಕ್ ವಕ್ತಾರ ಲಕ್ಷ್ಮಣ್ ಶೆಟ್ಟಿ ನಿಧನ: ಜಿಲ್ಲಾ ಕಾಂಗ್ರೆಸ್ ಸಮಿತಿ ಸಂತಾಪ


ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿಣಿ ಸದಸ್ಯ, ಮಂಗಳೂರು ನಗರ ಬ್ಲಾಕ್ ವಕ್ತಾರ ಲಕ್ಷ್ಮಣ್ ಶೆಟ್ಟಿ (52) ಅವರು ಹೃದಯಾಘಾತದಿಂದ ಬುಧವಾರ ನಿಧನ ಹೊಂದಿದ್ದು, ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರ ಸಂತಾಪ ಸೂಚಿಸಿದೆ.

ಲಕ್ಷ್ಮಣ್ ಶೆಟ್ಟಿ ಅವರ ಅಕಾಲಿಕ ನಿಧನದಿಂದ ಜಿಲ್ಲಾ ಕಾಂಗ್ರೆಸ್ ಆಘಾತಕ್ಕೊಳಗಾಗಿದೆ. ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದು, ಪಕ್ಷದ ಸಂಘಟನೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಎಲ್ಲ ವರ್ಗದ ಜನರೊಂದಿಗೆ ಆತ್ಮೀಯವಾಗಿ ಬೆರೆತು ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಶ್ರಮಿಸಿದ್ದರು. ಅವರ ಸರಳತೆ, ನಿಷ್ಠೆ ಹಾಗೂ ಪಕ್ಷದ ಮೇಲಿನ ಬದ್ಧತೆ ಸದಾ ಸ್ಮರಣೀಯ. ಅವರ ಅಗಲಿಕೆ ಜಿಲ್ಲಾ ಕಾಂಗ್ರೆಸ್ ಗೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ, ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್,  ಕಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹೀಂ, ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಗಂಗಾಧರ್ ಗೌಡ, ಶಾಸಕರಾದ ಅಶೋಕ್ ಕುಮಾರ್ ರೈ, ಐವನ್ ಡಿಸೋಜ, ಪಿ.ವಿ.ಮೋಹನ್, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಶಕುಂತಲಾ ಶೆಟ್ಟಿ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ಎಸ್.ಮೊಹಮ್ಮದ್, ಜಿ.ಎ.ಬಾವ, ಮಿಥುನ್ ರೈ, ರಕ್ಷಿತ್ ಶಿವರಾಂ, ಇನಾಯತ್ ಅಲಿ, ಟಿ.ಎಂ.ಶಹೀದ್, ಲಾವಣ್ಯ ಬಳ್ಳಾಲ್, ಮುಖಂಡರಾದ ಇಬ್ರಾಹೀಂ ಕೋಡಿಜಾಲ್, ಬಿ.ಎಚ್.ಖಾದರ್, ಶಶಿಧರ್ ಹೆಗ್ಡೆ, ಯು.ಕೆ.ಮೋನು, ಸುರೇಶ್ ಬಳ್ಳಾಲ್, ಸದಾಶಿವ್ ಉಳ್ಳಾಲ್, ಕೆ.ಹರಿನಾಥ್, ಮಮತಾ ಗಟ್ಟಿ, ನೀರಜ್ ಚಂದ್ರಪಾಲ್, ವಿಕಾಸ್ ಶಟ್ಟಿ, ನಝೀರ್ ಬಜಾಲ್, ಶಬ್ಬೀರ್ ಸಿದ್ದಕಟ್ಟೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ಪ್ರಕಾಶ್ ಸಾಲ್ಯಾನ್, ಜೆ.ಅಬ್ದುಲ್ ಸಲೀಂ, ರಮೇಶ್ ಶೆಟ್ಟಿ ಬೋಲಿಯಾರ್, ಪ್ರಶಾಂತ್ ಕಾಜೆವ, ಸತೀಶ್ ಕಾಶಿಪಟ್ಣ, ನಾಗೇಶ್ ಕುಮಾರ್ ಗೌಡ, ಕೃಷ್ಣ ಪ್ರಸಾದ್ ಆಳ್ವ, ಪದ್ಮನಾಭ ಪೂಜಾರಿ, ಪಿ.ಮೋಹನ್ ಕೋಟ್ಯಾನ್, ಪ್ರವೀಣ್ ಕುಮಾರ್ ಜೈನ್, ಪಿ.ಕೆ.ಅಭಿಲಾಷ್, ಯು.ಟಿ. ತೌಸೀಫ್, ರಾಧಕೃಷ್ಣ ಬೊಳ್ಳೂರ್, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರಾದ ಇಬ್ರಾಹೀಂ ನವಾಝ್, ಅಪ್ಪಿ, ಜೋಕಿಂ ಡಿಸೋಜಾ, ಕೆ.ಕೆ.ಶಾಹುಲ್ ಹಮೀದ್, ವಿಶ್ವಾಸ್ ಕುಮಾರ್ ದಾಸ್, ದಿನೇಶ್ ಮುಳೂರು, ನಾರಾಯಣ ನಾಯ್ಕ್, ಮನೋರಾಜ್ ರಾಜೀವ, ಲಾರೆನ್ಸ್ ಡಿ’ಸೋಜಾ, ಡಾ.ಶೇಖರ್ ಪೂಜಾರಿ, ಸುಭಾಶ್ಚಂದ್ರ ಶೆಟ್ಟಿ ಕುಲಾಲು, ಪ್ರೇಮನಾಥ್ ಬಳ್ಳಾಲ್ ಭಾಗ್,  ಬಿ.ಎಂ.ಅಬ್ಬಾಸ್ ಅಲಿ, ಚೇತನ್ ಬೆಂಗ್ರೆ,  ಶೈಲಜಾ, ಸುದರ್ಶನ್ ಜೈನ್, ಅಲಿಸ್ಟರ್ ಡಿಕುನ್ಹ, ಉಲ್ಲಾಸ್ ಕೋಟ್ಯಾನ್, ಸುಹಾನ್ ಆಳ್ವ ಸೇರಿದಂತೆ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಸಂಪಾತ ಸೂಚಿಸಿದ್ದಾರೆ.

ಮೃತರು ಪತ್ನಿ, ಓರ್ವ ಪುತ್ರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article