ಅಂಗನವಾಡಿ ಕಟ್ಟಡಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಭೂಮಿಪೂಜೆ

ಅಂಗನವಾಡಿ ಕಟ್ಟಡಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಭೂಮಿಪೂಜೆ


ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 20ನೇ ತಿರುವೈಲ್ ವಾರ್ಡಿನ ಕೆತ್ತಿಕಲ್‌ನಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣದ ಬಹುದಿನಗಳ ಕನಸು ಇಂದು ನನಸಾಗಿದ್ದು, 20 ಲಕ್ಷ ರೂ. ಅನುದಾನವನ್ನು ಒದಗಿಸಿ, ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಆ.22 ರಂದು ಭೂಮಿ ಪೂಜೆ ನೆರವೇರಿಸಿದರು.


ಕ್ಷೇತ್ರದ ಅಭಿವೃದ್ಧಿ ಹಾಗೂ ಮಕ್ಕಳ ಸೌಲಭ್ಯಗಳಿಗೆ ಆದ್ಯತೆ ನೀಡುತ್ತಿರುವ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರ ಪ್ರಯತ್ನದ ಫಲವಾಗಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನ ದೊರೆತಿದೆ. ಅಂಗನವಾಡಿ ಕಟ್ಟಡ ನಿರ್ಮಾಣಕ್ಕಾಗಿ ಸುಮಾರು 20 ಸೆಂಟ್ಸ್ ಜಾಗವನ್ನು ಕಾದಿರಿಸುವಲ್ಲಿ ನಿಕಟಪೂರ್ವ ಕಾರ್ಪೊರೇಟರ್ ಹೇಮಲತಾ ರಘು ಸಾಲಿಯಾನ್ ಅವರ ಪಾತ್ರವೂ ಮಹತ್ವದ್ದಾಗಿದೆ ಎಂದರು.


ಲಿಂಗಪ್ಪ ಸಾಲಿಯನ್, ಬಾಬು ಸಾಲಿಯನ್, ಶೇಖರ್ ಟೈಲರ್, ಜೈ ಶಂಕರ್ ಮಿತ್ರ ಮಂಡಳಿ ಅಧ್ಯಕ್ಷ ಸಂತೋಷ್ ಆಚಾರ್ಯ, ಜೈ ಶಂಕರ್ ಮಾತೃ ಮಂಡಳಿ ಅಧ್ಯಕ್ಷೆ ಸೌಮ್ಯ ದಯಾನಂದ್ ಬಂಗೇರ, ಅಶೋಕ್ ಅಮೀನ್, ಅನಿಲ್‌ಕುಮಾರ್ ರೈ, ದಿನೇಶ್ ಸನದಮನೆ, ಭಾವೇಶ್ ಶೆಟ್ಟಿ, ಬೂತ್ ಅಧ್ಯಕ್ಷ ಚರಣ್ ರಾಜ್, ಗಿರೀಶ್ ಆಚಾರ್ಯ, ವಸಂತ್ ಆಚಾರ್ಯ, ದಿವಾಕರ್ ಆಚಾರ್ಯ, ಅಂಗನವಾಡಿ ಶಿಕ್ಷಕಿ ಮಾಲತಿ ಉಪಸ್ಥಿತರಿದ್ದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article