ಲಿಂಗತ್ವ ಅಲ್ಪಸಂಖ್ಯಾತರೊಂದಿಗೆ ರಕ್ಷಾಬಂಧನ ಆಚರಿಸಿದ ರಾಜಕೇಸರಿ ಸೇವಾ ಟ್ರಸ್ಟ್‌ನಿಂದ ಮಾದರಿ ನಡೆ
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡಿ, ಇಂಥಹ ಕಾರ್ಯಕ್ರಮ ರಾಜ್ಯದಲ್ಲೇ ಪ್ರಥಮ ಎಂದು ಸಂತಸ ವ್ಯಕ್ತಪಡಿಸಿ ಇಂತಹ ವಿನೂತನ ಪರಿಕಲ್ಪನೆಯ ಕಾರ್ಯಕ್ರಮಗಳು ಇನ್ನಷ್ಟು ರಾಜಕೇಸರಿ ಸೇವಾ ಟ್ರಸ್ಟ್‌ನಿಂದ ನಡೆಯಲಿ ಎಂದು ಶ್ಲಾಘಿಸಿದರು.
ನವಸಹಜ ಸಮುದಾಯ ಸಂಘಟನೆಯ ಅಧ್ಯಕ್ಷೆ ನಿಖಿಲಾ ಕೃತಿ ಮಾತನಾಡಿ, ನಾಗರಿಕ ಸಮಾಜದಲ್ಲಿ ತಾರತಮ್ಯಕ್ಕೆ ಒಳಗಾಗಿ ಸಂಕಷ್ಟದಲ್ಲಿರುವ ನಮ್ಮನ್ನು ಒಟ್ಟುಗೂಡಿಸಿ ಭ್ರಾತೃತ್ವ ಬೆಸೆಯುವ ಪ್ರಯತ್ನ ನಿಜಕ್ಕೂ ಶ್ಲಾಘನೀಯ ಎಂದರು.
ರಾಜಕೇಸರಿ ಸೇವಾ ಟ್ರಸ್ಟ್‌ನ ಸದಸ್ಯ ಮನೋಜ್ ಕುಂದರ್ ಅವರನ್ನು ಅಭಿನಂದಿಸಲಾಯಿತು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ಮಹಾನಗರ ಧರ್ಮ ಜಾಗರಣ ಸಂಯೋಜಕ ಚರಣ್ ಅಳಪೆ, ನವಸಹಜ ಸಮುದಾಯ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಅರುಂಧತಿ, ರಾಜಕೇಸರಿ ಸೇವಾ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಂತೋಷ್ ಕೊಲ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕೇಶ್ ಕುಲಾಲ್ ಮಂಗಳಾದೇವಿ, ಸಂಘಟನಾ ಕಾರ್ಯದರ್ಶಿ ವರುಣ್ ಕುಮಾರ್ ಬಪ್ಪನಾಡು, ಕ್ರೀಡಾ ಸಂಚಾಲಕರಾದ ಸಂದೀಪ್ ಸಾಲಿಯಾನ್, ಕಾರ್ಯದರ್ಶಿ ಶರತ್ ಚಿಲಿಂಬಿ ಮತ್ತಿತರರು ಉಪಸ್ಥಿತರಿದ್ದರು.
ಸಮಾಜದಲ್ಲಿ ಸಮಾನತೆ, ಸಹೋದರತ್ವ ಮತ್ತು ಮಾನವೀಯತೆಯ ಮೌಲ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಮುಂದುವರಿಸುವ ಸಂಕಲ್ಪವನ್ನು ಸಂಘಟಕರು ವ್ಯಕ್ತಪಡಿಸಿದರು.

