ನಾಳೆ ಜಿಲ್ಲೆಯಲ್ಲಿ ಕೆಲವು ತಾಲೂಕಿನ ಶಾಲೆಗಳಿಗೆ ಹಾಗೂ ಕೆಲವು ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ

ನಾಳೆ ಜಿಲ್ಲೆಯಲ್ಲಿ ಕೆಲವು ತಾಲೂಕಿನ ಶಾಲೆಗಳಿಗೆ ಹಾಗೂ ಕೆಲವು ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಆಗಸ್ಟ್ 4 ರಂದು ಜಿಲ್ಲೆಯ ಕೆಲವು ತಾಲೂಕಿನ ಶಾಲೆಗಳಿಗೆ ಹಾಗೂ ಇನ್ನೂ ಕೆಲವು ತಾಲೂಕಿನ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಂಗಳೂರು, ಬಂಟ್ವಾಳ, ಮೂಡುಬಿದಿರೆ, ಮುಲ್ಕಿ ಹಾಗೂ ಉಳ್ಳಾಲ ತಾಲೂಕಿನ ಎಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ.

ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ, ಖಾಸಗಿ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ, ಎಲ್ಲಾ ಐಟಿಐ, ಡಿಪ್ಲೊಮಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಹಾಗೂ ದ.ಕ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ದರ್ಶನ್ ಹೆಚ್.ವಿ. ರಜೆ ಘೋಷಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article