ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಚುನಾವಣೆ: ಮೈಸೂರು ವಿಭಾಗದ ನಿರ್ದೇಶಕರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟುಗೆ ಭರ್ಜರಿ ಗೆಲುವು

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಚುನಾವಣೆ: ಮೈಸೂರು ವಿಭಾಗದ ನಿರ್ದೇಶಕರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟುಗೆ ಭರ್ಜರಿ ಗೆಲುವು


ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ಆಡಳಿತ ಮಂಡಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಮೈಸೂರು ವಿಭಾಗದ ನಿರ್ದೇಶಕ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಸ್ಪರ್ಧಿಸಿ, ಲಭ್ಯವಿದ್ದ 18 ಮತಗಳ ಪೈಕಿ 18 ಮತಗಳನ್ನೂ ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ.

ರಾಜ್ಯದ ಸಹಕಾರ ಕ್ಷೇತ್ರದ ಧೀಮಂತ ನಾಯಕ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಸಂಪೂರ್ಣ ಬೆಂಬಲದಿಂದ ಮೈಸೂರು ವಿಭಾಗದ 18ಕ್ಕೆ 18 ಮತಗಳು ಶಶಿಕುಮಾರ್ ರೈ ಅವರಿಗೆ ದೊರೆತು ಭರ್ಜರಿ ಗೆಲುವು ಪಡೆದು ಕೊಂಡಿದ್ದಾರೆ. ಈ ಮೂಲಕ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ 62 ವರ್ಷಗಳ ಇತಿಹಾಸದಲ್ಲಿ ನಿರ್ದೇಶಕರಾಗಿ ಆಯ್ಕೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಪ್ರತಿನಿಧಿ ಎಂಬ ವಿಶಿಷ್ಟ ಹೆಗ್ಗಳಿಕೆಗೆ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಪಾತ್ರರಾಗಿದ್ದಾರೆ.

ಸಹಕಾರಿ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾಗಿ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ, ಪುತ್ತೂರು ತಾಲೂಕಿನ ಇರ್ದೆ-ಬೆಟ್ಟಂಪಾಡಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಹಾಗೂ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ.

ಸಹಕಾರ ಕ್ಷೇತ್ರದ ರಾಜ್ಯ ನಾಯಕ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಸಹಕಾರ ಕ್ಷೇತ್ರದಲ್ಲಿನ ಅಪೂರ್ವ ಅನುಭವ, ಸಂಘಟನಾ ಸಾಮರ್ಥ್ಯ ಹಾಗೂ ಸೇವೆಯಿಂದ ಶಶಿಕುಮಾರ್ ರೈ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಚುನಾವಣೆಯಲ್ಲಿ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಸ್ಥಾನಮಾನ ದೊರೆತ್ತಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article