ಟಾಕ್ಷಿಕ್ ಬಿಡುಗಡೆ: ನಟ ಯಶ್ ಶ್ರೀ ಕ್ಷೇತ್ರ ಧರ್ಮಸ್ಥಳ, ಸುರ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ
ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು., ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಯಶ್ ಅವರನ್ನು ಕಂಡು ವಿಮಾನ ನಿಲ್ದಾಣದ ಆವರಣದಲ್ಲಿದ್ದ ಅಭಿಮಾನಿಗಳು ಹಾಗೂ ಮುಖಂಡರು ಪುಷ್ಪಗುಚ್ಛ ನೀಡಿ, ಜೈಕಾರ ಕೂಗಿ ಬರಮಾಡಿಕೊಂಡರು.
ಟಾಕ್ಸಿಕ್ ಚಿತ್ರ ನಾಳೆ ವಿಶ್ವಾದ್ಯಂತ ತೆರೆಕಾಣುತ್ತಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ತೆರಳಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ್ದಾರೆ. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಚಲನಚಿತ್ರ ರಂಗದಲ್ಲಿ ಯಶ್‌ನ ಸೇವೆ ಮತ್ತು ಸಾಧನೆಯನ್ನು ಶ್ಲಾಘಿಸಿ ಅಭಿನಂದಿಸಿದ ಹೆಗ್ಗಡೆಯವರು ಇನ್ನೂ ಹೆಚ್ಚಿನ ಸಾಧನೆ ಮಾಡುವಂತಾಗಲೆಂದು ಆಶೀರ್ವದಿಸಿದರು. ಕ್ಷೇತ್ರದ ಪರವಾಗಿ ಯಶ್ ಅವರನ್ನು ಹೆಗ್ಗಡೆಯವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಬಳಿಕ ಸಮೀಪದ ಖ್ಯಾತ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೂ ಭೇಟಿ ನೀಡಿ ಮಣ್ಣಿನ ಹರಕೆ ಅರ್ಪಿಸಿರು.
ತಮ್ಮ ಪ್ರತೀ ಸಿನಿಮಾ ಬಿಡುಗಡೆಗೂ ಮುನ್ನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆಯುವ ಸಂಪ್ರದಾಯವನ್ನು ಯಶ್ ಹಲವು ವರ್ಷಗಳಿಂದ ಪಾಲಿಸಿಕೊಂಡು ಬಂದಿದ್ದು, ಈ ಬಾರಿಯೂ ಅದೇ ಪದ್ಧತಿಯನ್ನು ಮುಂದುವರಿಸಿದ್ದಾರೆ.
ಯಶ್ ಅವರು ಚೆನ್ನೈನಿಂದ ನೇರವಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಸಂಜೆ ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಕೇರಳದ ಕೊಚ್ಚಿಗೆ ’ಟಾಕ್ಸಿಕ್’ ಚಿತ್ರದ ಪ್ರಮೋಷನ್ ಕಾರ್ಯಕ್ರಮಕ್ಕಾಗಿ ತೆರಳಿದರು.