ಜಿಲ್ಲೆಯ ಬೆಳೆವಣಿಗೆಯಲ್ಲಿ ಸಹಕಾರಿ ಕ್ಷೇತ್ರದ ಪಾತ್ರ ಮಹತ್ವದ್ದು: ಡಾ. ಎಂ.ಎನ್. ರಾಜೇಂದ್ರ ಕುಮಾರ್
ದಿ.ಮೊಳಹಳ್ಳಿ ಶಿವರಾವ್ ಜನ್ಮ ದಿನಾಚರಣೆ
ಅವರು ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ನಗರದ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಸಹಕಾರಿ ಪಿತಾಮಹ ದಿ.ಮೊಳಹಳ್ಳಿ ಶಿವರಾವ್‌ರವರ ವರ 146ನೇ ಜನ್ಮ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಹಕಾರಿ ಕ್ಷೇತ್ರದ ನಮ್ಮೆಲ್ಲರಿಗೂ ಮಾರ್ಗದರ್ಶನ ಕೊಟ್ಟವರು ಮೊಳಹಳ್ಳಿ ಶಿವರಾವ್ರು. ಇಂದು ದಕ್ಷಿಣ ಕನ್ನಡ ಜಿಲ್ಲೆ ದೇಶದಲ್ಲಿ 10ನೇ ಸ್ಥಾನದಲ್ಲಿ ಗುರುತಿಸಿಕೊಳ್ಳಲು ಸಹಕಾರಿ ಕ್ಷೇತ್ರದ ಕೊಡುಗೆ ಅಪಾರವಾಗಿದೆ. ವಾಣಿಜ್ಯ ಬ್ಯಾಂಕ್‌ಗಳು ವಿಲೀನಗೊಂಡು ಹಲವು ಬ್ಯಾಂಕ್‌ಗಳೇ ಇಲ್ಲದಂತಾಗಿದೆ. ಆದರೆ ಸಹಕಾರಿ ಕ್ಷೇತ್ರ ವಿಸ್ತಾರವಾಗಿ ಬೆಳೆಯುತ್ತಿದೆ. ಜಿಲ್ಲೆಯ ಬೆಳೆವಣಿಗೆಯಲ್ಲಿ ಸಹಕಾರಿ ಕ್ಷೇತ್ರದ ಪಾತ್ರ
ಮಹತ್ವದ್ದಾಗಿದೆ. ಸಹಕಾರಿ ಕ್ಷೇತ್ರ ವಾಣಿಜ್ಯ ಬ್ಯಾಂಕ್‌ಗಳಿಂತ ಮುಂದೆ ಹೋಗಿ ಬೆಳೆಯಲು ಮೊಳಹಳ್ಳಿ ಶಿವರಾವ್ರ ಮಾರ್ಗದರ್ಶನ ಕಾರಣ ಎಂದರು.
ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಮಾತನಾಡಿ, ಹಿರಿಯರ ದುಡಿಮೆಯ ಶ್ರಮದಿಂದ ಸಹಕಾರಿ ಕ್ಷೇತ್ರ ಸೇರಿದಂತೆ ಎಲ್ಲ ಕ್ಷೇತ್ರದಲ್ಲೂ ಜಿಲ್ಲೆಗೆ ಸ್ಥಾನ ದೊರೆತಿದೆ. ಗುಣಮಟ್ಟದ ಸೇವೆಯಿಂದ ಉನ್ನತ ಸ್ಥಾನ, ಯಶಸ್ಸು ಸಾಧ್ಯ ಎಂದರು.
ಆಕರ ಗ್ರಂಥ ಬಿಡುಗಡೆ..
ಮೊಳಹಳ್ಳಿ ಶಿವರಾವ್‌ರವರ ‘ಆಕರ ಗ್ರಂಥ’ವನ್ನು ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಬಿಡುಗಡೆ ಮಾಡಿದರು. ಗ್ರಂಥದ ಲೇಖಕ ಅರವಿಂದ ಚೊಕ್ಕಾಡಿ ಮಾತನಾಡಿ, ಕರಾವಳಿಯನ್ನು ಕಟ್ಟಿದ ಮೂವರು ಪ್ರಮುಖ ಮಹಾನೀಯರಲ್ಲಿ ಮೊಳಹಳ್ಳಿ ಶಿವರಾವ್ ಒಬ್ಬರು. ಸಹಕಾರಿ ಕ್ಷೇತ್ರ ತುಂಬಾ ಅವಶ್ಯಕ ಕ್ಷೇತ್ರ. ಇಲ್ಲಿ ಎಲ್ಲರನ್ನೂ ಒಟ್ಟಾಗಿ ಕೊಂಡೊಯ್ಯುವ ನಾಯಕತ್ವ ಬೇಕು ಎಂದರು.
ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಮಹೇಶ್ ಹೆಗ್ಡೆ ಎಂ., ಅಶೋಕ್ ಕುಮಾರ್ ಶೆಟ್ಟಿ, ಜೈರಾಜ್ ಬಿ.ರೈ, ಎಸ್.ಬಿ.ಜಯರಾಮ್ ರೈ, ರಾಜೇಶ್ ರಾವ್, ಮೋನಪ್ಪ ಶೆಟ್ಟಿ ಎಕ್ಕಾರು, ಕುಶಾಲಪ್ಪ ಗೌಡ, ಎಸ್.ಎನ್.ಮನ್ಮಥ, ದ.ಕ. ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೊಡವೂರು ರವಿರಾಜ ಹೆಗ್ಡೆ, ದ.ಕ. ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್.ರಮೇಶ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮತ್ತಿತರರು ಇದ್ದರು.
ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಸ್ವಾಗತಿಸಿದರು. ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಸಿಇಒ ಎಸ್.ವಿ.ಹಿರೇಮಠ ವಂದಿಸಿದರು. ಬ್ಯಾಂಕ್ ಸಿಬ್ಬಂದಿ ರಾಜೀವ್ ಕಕ್ಯಪದವು ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮತ್ತು ಅರವಿಂದ ಚೊಕ್ಕಾಡಿ ಅವರನ್ನು ಗೌರವಿಸಲಾಯಿತು. ಆರಂಭದಲ್ಲಿ ನಡೆದ ಸಹಕಾರಿಗಳ ಪ್ರತಿಜ್ಞಾ ವಿಧಿಯನ್ನು ಬ್ಯಾಂಕ್ ಸಿಇಒ ಗೋಪಾಲಕೃಷ್ಣ ಭಟ್ ನಡೆಸಿಕೊಟ್ಟರು.