ವೈದ್ಯಕೀಯ ನೆರವು ಒದಗಿಸುವುದು ಪುಣ್ಯದ ಕೆಲಸ: ಜೈರಾಜ್ ಎಚ್. ಸೋಮಸುಂದರಂ
ಬಿಲ್ಲವಾಸ್ ದುಬೈ ಆಂಡ್ ನಾರ್ದರ್ನ್ ಎಮಿರೇಟ್ಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಹಯೋಗದೊಂದಿಗೆ ಭಾನುವಾರ ನಡೆದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಶ್ರೀ ಗೋಕರ್ಣನಾಥೇಶ್ವರ ಶಿಕ್ಷಣ ಸಂಸ್ಥೆಗಳ ಮಾಜಿ ಡೀನ್ ಡಾ. ಉಮ್ಮಪ್ಪ ಪೂಜಾರಿ ಪಿ. ಮಾತನಾಡಿ, ವಿದ್ಯಾರ್ಥಿಗಳು ಕೇವಲ ಅಂಕ ಪಡೆಯುವತ್ತ ಗಮನಹರಿಸದೆ, ತಮ್ಮ ಪ್ರತಿಭೆ, ಕೌಶಲ್ಯ ಬೆಳೆಸುವತ್ತ ಕೂಡಾ ಗಮನ ಹರಿಸಬೇಕು ಎಂದರು.
ಬಿಲ್ಲವಾಸ್ ಫ್ಯಾಮಿಲಿ ದುಬೈ ಅಧ್ಯಕ್ಷ ದೀಪಕ್ ಎಸ್.ಪಿ. ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರದ ಟ್ರಸ್ಟಿ ಕೃತೀನ್ ಡಿ. ಅಮೀನ್, ಶ್ರೀ ಗುರು ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸೀತಾರಾಮ ಎಚ್. ಅತಿಥಿಗಳಾಗಿದ್ದರು.
ಶೈಕ್ಷಣಿಕ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ, ವಿವಿಧ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದ 11 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಾಧಕಿ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಹಾಗೂ ಬಹುಮುಖ ಪ್ರತಿಭೆ ಶ್ರೀಜಾ ಸಿ. ಕೋಟ್ಯಾನ್ ಅವರನ್ನು ಗೌರವಿಸಲಾಯಿತು. 200 ಅರ್ಹ ಬಡ ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಿಸಲಾಯಿತು. 9 ಮಂದಿ ತುರ್ತು ಅಗತ್ಯವಿರುವವರಿಗೆ 1.95 ಲಕ್ಷ ರೂ. ವೈದ್ಯಕೀಯ ನೆರವು ನೀಡುವ ಮೂಲಕ ಮಾನವೀಯ ಸೇವೆಗೆ ಒತ್ತು ನೀಡಲಾಯಿತು.
ಬಿಲ್ಲವಾಸ್ ದುಬೈ ಆಂಡ್ ಎಮಿರೇಟ್ಸ್ ಚಾರಿಟಬಲ್ ಟ್ರಸ್ಟ್ ಕೋಶಾಧಿಕಾರಿ ವಿಠ್ಠಲ ಪೂಜಾರಿ, ಬಿಲ್ಲವಾಸ್ ಫ್ಯಾಮಿಲಿ ದುಬೈ ಮಾಜಿ ಅಧ್ಯಕ್ಷ ಪ್ರಭಾಕರ್ ಸುವರ್ಣ, ಕೋಶಾಧಿಕಾರಿ ಪ್ರಭಾಕರ ಪೂಜಾರಿ, ಸದಸ್ಯರಾದ ಆನಂದ ಬೈಲೂರು, ಪ್ರವೀಣ್ ಕರ್ಕೇರ, ಶಿವ ಕೋಟ್ಯಾನ್, ಹೀತಾಂಬರ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.
ಬಿಲ್ಲವಾಸ್ ದುಬೈ ಆಂಡ್ ಎಮಿರೇಟ್ಸ್ ಚಾರಿಟಬಲ್ ಟ್ರಸ್ಟ್‌ನ ಟ್ರಸ್ಟಿ ಮಾಧವ ಪೂಜಾರಿ ಸ್ವಾಗತಿಸಿದರು. ಬಿಲ್ಲವಾಸ್ ಫ್ಯಾಮಿಲಿ ದುಬೈ ಸದಸ್ಯ ಕೃಷ್ಣ ಪೂಜಾರಿ ವಂದಿಸಿದರು. ಕುಸುಮಾಕರ್ ಕುಂಪಲ ಹಾಗೂ ಶ್ರೀ ಗುರು ಚಾರಿಟಬಲ್ ಟ್ರಸ್ಟ್ ಉಪಾಧ್ಯಕ್ಷ ರಮೇಶ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು.