ರಥಬೀದಿ ಕಾಲೇಜಿನಲ್ಲಿ ಎಸ್‌ಐಆರ್ ಮಾಹಿತಿ ಕಾರ್ಯಕ್ರಮ

ರಥಬೀದಿ ಕಾಲೇಜಿನಲ್ಲಿ ಎಸ್‌ಐಆರ್ ಮಾಹಿತಿ ಕಾರ್ಯಕ್ರಮ


ಮಂಗಳೂರು: ಇಲ್ಲಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಎಸ್‌ಐಆರ್ ಮಾಹಿತಿ ಕಾರ್ಯಕ್ರಮ ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್ ಮತ್ತು ರಾಜ್ಯಶಾಸ್ತ್ರ ವಿಭಾಗಗಳ ಜಂಟಿ ಆಶ್ರಯದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಕಾವೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಾಗೂ ಜಿಲ್ಲಾ ಎಸ್‌ಐಆರ್ ತರಬೇತುದಾರ ಸುಚೇತ್ ಸುವರ್ಣ ಅವರು ಭಾಗವಹಿಸಿ ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಕುರಿತು ವಿವರವಾದ ಮಾಹಿತಿ ನೀಡಿ ಅವರ ಉದ್ದೇಶಗಳನ್ನು ಮತ್ತು ಅಗತ್ಯಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯಕರ ಭಂಡಾರಿ ಎಂ. ಅವರು, ವಿದ್ಯಾರ್ಥಿಗಳು ಎಸ್‌ಐಆರ್ ಮಾಹಿತಿಯನ್ನು ತಿಳಿದು ತಮ್ಮ ಮನೆಗಳಲ್ಲಿ ಹಾಗೂ ಸಮಾಜದಲ್ಲಿ ಎಸ್‌ಐಆರ್ ಜಾಗೃತಿ ಮೂಡಿಸುವಲ್ಲಿ ಕ್ರಮ ವಹಿಸುವಂತೆ ಸೂಚಿಸಿದರು.

ತೃತೀಯ ಬಿಎ ವಿದ್ಯಾರ್ಥಿ ಆಕಾಶ್ ಸ್ವಾಗತಿಸಿದರು. ಅಂಬಿಕಾ ವಂದಿಸಿ, ಮಹೇಶ್ ಕಾರ್ಯಕ್ರಮ ನಿರೂಪಿಸಿದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ದುಗ್ಗಪ್ಪ ಕಜೆಕಾರ್, ಐಕ್ಯೂಎಸಿ ಸಂಯೋಜಕ ದೇವಿಪ್ರಸಾದ್, ಸಹ ಸಂಯೋಜಕಿ ಡಾ. ಜ್ಯೋತಿಪ್ರಿಯಾ, ಚುನಾವಣಾ ಸಾಕ್ಷರತಾ ಕ್ಲಬ್‌ನ ಸಂಯೋಜಕಿ ವತ್ಸಲ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ನಸೀಮಾ ಬೇಗಂ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article