ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
Saturday, August 15, 2026
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್)ನ ಪ್ರಧಾನ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕೊಡಿಯಾಲ್‌ಬೈಲ್‌ನಲ್ಲಿರುವ ಬ್ಯಾಂಕಿನ ಪ್ರಧಾನ ಕಚೇರಿ ಆವರಣದಲ್ಲಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಬಳಿಕ ಮಾತನಾಡಿದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು, ‘ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಶಾಂತಿ, ಏಕತೆ ಮತ್ತು ಧೈರ್ಯದ ಪ್ರತೀಕವಾಗಿರುವ ತ್ರಿವರ್ಣ ಧ್ವಜವು ಹೆಮ್ಮೆಯಿಂದ ಆಕಾಶದೆತ್ತರದಲ್ಲಿ ಹಾರುತ್ತದೆ. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ವೀರ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಸ್ವಾತಂತ್ರ್ಯೋತ್ಸವದ ಈ ಸ್ಮರಣೀಯ ಸಂದರ್ಭದಲ್ಲಿ ಬ್ಯಾಂಕಿನ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಒಗ್ಗಟ್ಟಿನಿಂದ ಮತ್ತು ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಿ, ಎಸ್‌ಸಿಡಿಸಿಸಿ ಬ್ಯಾಂಕನ್ನು ಇನ್ನಷ್ಟು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುವ ಸಂಕಲ್ಪ ಮಾಡಬೇಕು. ಸಹಕಾರ ಕ್ಷೇತ್ರದ ಮೂಲಕ ಸಮಾಜದ ಆರ್ಥಿಕ ಪ್ರಗತಿಗೆ ಮತ್ತಷ್ಟು ಕೊಡುಗೆ ನೀಡಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್.ಎನ್., ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಕೆ. ಜೈರಾಜ್ ಬಿ. ರೈ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್, ಹಾಗೂ ಬ್ಯಾಂಕಿನ ಹಿರಿಯ ಮತ್ತು ಕಿರಿಯ ಅಧಿಕಾರಿಗಳು, ವಿವಿಧ ವಿಭಾಗಗಳ ಸಿಬ್ಬಂದಿಗಳು ಉಪಸ್ಥಿತರಿದ್ದರು.
