ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ‘ನಮ್ಮ ಕುಡ್ಲ’ ಗೌರವ

ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ‘ನಮ್ಮ ಕುಡ್ಲ’ ಗೌರವ


ಮಂಗಳೂರು: ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ನಿರಂತರ ಪ್ರೋತ್ಸಾಹ ನೀಡುತ್ತಿರುವ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ‘ನಮ್ಮ  ಕುಡ್ಲ’ ವಾಹಿನಿಯ ವತಿಯಿಂದ ಸೋಮವಾರ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಸನ್ಮಾನಿಸಲಾಯಿತು.

ಜಿಲ್ಲೆಯ ಪ್ರಥಮ ತುಳು ವಾರ್ತಾ ವಾಹಿನಿಯಾದ ‘ನಮ್ಮ ಕುಡ್ಲ’ ವತಿಯಿಂದ ಇತ್ತೀಚೆಗೆ ‘ನಮ್ಮ ಕುಡ್ಲ ಕಂಬಳ ಪ್ರಶಸ್ತಿ-2026’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಂಬಳದ ಪ್ರೇಮಿ ಹಾಗೂ ಪ್ರೋತ್ಸಾಹಕರಾಗಿರುವ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಗೌರವಿಸಲಾಯಿತು.

ಕರಾವಳಿ ಕರ್ನಾಟಕದ ಸಾಮಾಜಿಕ ಹಾಗೂ ಆರ್ಥಿಕ ಕ್ಷೇತ್ರದಲ್ಲಿ ಗಣನೀಯ ಕೊಡುಗೆ ನೀಡಿರುವ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಕಂಬಳ ಸೇರಿದಂತೆ  ತುಳುನಾಡಿನ ಕಲೆ, ಸಂಸ್ಕೃತಿ  ಹಾಗೂ ಜಾನಪದ ಪರಂಪರೆಯ ಪ್ರೋತ್ಸಾಹಕರಾಗಿ ಗುರುತಿಸಿಕೊಂಡಿದ್ದಾರೆ. ಅವರ ಕಂಬಳ ಪ್ರೋತ್ಸಾಹವನ್ನು ಗುರುತಿಸಿ ‘ನಮ್ಮ ಕುಡ್ಲ ಕಂಬಳ ಪ್ರಶಸ್ತಿ-2026’ರ ಪ್ರಯುಕ್ತ ಈ ಸನ್ಮಾನ ನೆರವೇರಿಸಲಾಯಿತು.

‘ನಮ್ಮ ಕುಡ್ಲ’ ವಾಹಿನಿಯ ಮುಖ್ಯಸ್ಥ ಲೀಲಾಕ್ಷ ಕರ್ಕೇರ ಅವರು ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಉದ್ಯಮಿಗಳಾದ ಜಯಪ್ರಕಾಶ್ ತುಂಬೆ, ಪುಷ್ಪರಾಜ್ ಜೈನ್ ಹಾಗೂ ‘ನಮ್ಮ ಕುಡ್ಲ’ ವಾಹಿನಿಯ ಮಾರ್ಕೆಟಿಂಗ್ ಮ್ಯಾನೇಜರ್ ಸುದರ್ಶನ್ ಕೋಟ್ಯಾನ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article