ಗೋ ರಕ್ಷಾ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ: ವಿಹೆಚ್‌ಪಿ ಖಂಡನೆ
Sunday, August 16, 2026
ಮಂಗಳೂರು: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಸಾಲೂರು ಗ್ರಾಮದ ಬಳಿ ಅಕ್ರಮವಾಗಿ ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ವಾಹನವನ್ನು ತಡೆದು ಪೊಲೀಸರಿಗೆ ಮಾಹಿತಿ ನೀಡಿದ ಸಾಗರ ಘಟಕದ ಗೋ ರಕ್ಷಾ ಕಾರ್ಯಕರ್ತರ ಮೇಲೆ ಗೋ ಕಳ್ಳರು ಪಿಕಪ್ ವಾಹನದಿಂದ ಢಿಕ್ಕಿ ಹೊಡೆಸಿ, ಲಾಂಗ್ ಹಾಗೂ ಮಚ್ಚುಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲ್ಲಲು ಯತ್ನಿಸಿರುವುದನ್ನು ವಿಹೆಚ್‌ಪಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ತೀವ್ರವಾಗಿ ಖಂಡಿಸುತ್ತೇವೆ.
ಇಂದು ಈ ಅಕ್ರಮ ಗೋ ಸಾಗಾಟದ ಜಾಲವು ತಾಲೂಕಿನ ಎಲ್ಲೆಯನ್ನೂ ಮೀರಿ ಬೃಹತ್ ಪ್ರಮಾಣದಲ್ಲಿ ಬೆಳೆದಿದ್ದು, ಸಾರ್ವಜನಿಕರ ಜೀವಕ್ಕೂ ಕಂಟಕವಾಗಿ ಪರಿಣಮಿಸಿದೆ. ಈ ಭೀಕರ ದಾಳಿ ನಡೆಸಿ ಗೂಂಡಾಗಿರಿ ಮೆರೆದಿರುವ ಅಪರಾಧಿಗಳ ಮೇಲೆ ತಕ್ಷಣವೇ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಜೈಲಿಗಟ್ಟಬೇಕು ರಾಜ್ಯ ಸರಕಾರಕ್ಕೆ ಆಗ್ರಹಿಸುತ್ತೇವೆ. ತಪ್ಪಿತಸ್ಥರ ವಿರುದ್ಧ ತಕ್ಷಣ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಶರಣ್ ಪಂಪ್‌ವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.