ಯುವವಾಹಿನಿ ಮೂಡುಬಿದಿರೆ ಘಟಕದಿಂದ ನಾರಾಯಣ ಗುರು ಅರಿವು-ವಿದ್ಯಾರ್ಥಿವೇತನ-ಯುವಸಿರಿ ಸಮ್ಮಾನ: 49 ವಿದ್ಯಾರ್ಥಿಗಳಿಗೆ ಯುವಸಿರಿ ಪ್ರಶಸ್ತಿ, 20 ಮಂದಿಗೆ ವಿದ್ಯಾರ್ಥಿವೇತನ
ಶಾಸಕ ಉಮಾನಾಥ ಕೋಟ್ಯಾನ್ ಕಾಯ೯ಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಯುವವಾಹಿನಿ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ಅಧ್ಯಕ್ಷತೆ ವಹಿಸಿದ್ದರು.
ಪೂಂಜಾಲಕಟ್ಟೆಯ ನಾರಾಯಣ ಗುರು ವಸತಿ ಶಾಲೆಯ ಪ್ರಾಂಶುಪಾಲ ಸಂತೋಷ್ ಎಸ್. ಸನಿಲ್ ‘ಗುರು ಸಂದೇಶ’ ನೀಡಿದರು.
ಪಿಯುಸಿಯಲ್ಲಿ ಶೇ.100 ಅಂಕ ಗಳಿಸಿದ ದಿಶಾ ಪೂಜಾರಿ ಸೇರಿದಂತೆ ತೃಷಾ ಯು. ಪೂಜಾರಿ, ಕಾವ್ಯಶ್ರೀ (ಶೇ.98.17) ಹಾಗೂ ಎಸ್‌ಎಸ್‌ಎಲ್‌ಸಿಯಲ್ಲಿ ಸಾಧನೆಗೈದ ಪ್ರೇಕ್ಷಾ ಅವರಿಗೆ ಶ್ರೀ ಹರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಎಸ್‌ಎಸ್‌ಎಲ್‌ಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ಒಟ್ಟು 49 ವಿದ್ಯಾರ್ಥಿಗಳಿಗೆ ಯುವಸಿರಿ ಪ್ರಶಸ್ತಿ ಹಾಗೂ ಗೌರವಧನ, 20 ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಇದೇ ವೇಳೆ ನಾಲ್ವರು ಯುವವಾಹಿನಿಯ ನೂತನ ಸದಸ್ಯರಾಗಿ ಸೇರ್ಪಡೆಗೊಂಡರು.
ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಎಸ್. ಸನಿಲ್ ಅವರನ್ನು ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ಯುವವಾಹಿನಿ ಕೇಂದ್ರ ಸಮಿತಿ ಕೋಶಾಧಿಕಾರಿ ಸತೀಶ್ ಕಿಲ್ಪಾಡಿ, ಮೂಡುಬಿದಿರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನೂತನ ಅಧ್ಯಕ್ಷ ಹಾಗೂ ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ನವೀನ್ ಚಂದ್ರ ಕರ್ಕೇರ ಉಪಸ್ಥಿತರಿದ್ದರು.
ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಶುಭಕರ ಪೂಜಾರಿ ಸಾವ್ಯ, ಮೂಡುಬಿದಿರೆ ಘಟಕದ ಯುವಸ್ಪಂದನ ಸೇವಾ ಯೋಜನೆಯ ಅಧ್ಯಕ್ಷ ನವಾನಂದ, ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕಿ ಯೋಗಿತಾ ನವಾನಂದ, ವಿದ್ಯಾನಿಧಿ ನಿರ್ದೇಶಕ ದಯಾನಂದ ಮಾಸ್ತಿಕಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನವಾನಂದ ಸ್ವಾಗತಿಸಿದರು. ಶಂಕರ ಕೋಟ್ಯಾನ್ ಮತ್ತು ಪೂರ್ಣಿಮಾ ಕೋಟ್ಯಾನ್ ಮಾರ್ನಾಡ್ ಕಾಯ೯ಕ್ರಮ ನಿರೂಪಿಸಿದರು. ಕಾರ್ಯದರ್ಶಿ ಮೇಘನಾ ವಂದಿಸಿದರು.
