ಸೆ.6 ರಂದು  ಕಂಬಳ ಓಟಗಾರರ ತರಬೇತಿ ಶಿಬಿರಕ್ಕೆ ಆಯ್ಕೆ ಪ್ರಕ್ರಿಯೆ

ಸೆ.6 ರಂದು ಕಂಬಳ ಓಟಗಾರರ ತರಬೇತಿ ಶಿಬಿರಕ್ಕೆ ಆಯ್ಕೆ ಪ್ರಕ್ರಿಯೆ


ಮೂಡುಬಿದಿರೆ: ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಮಾನ್ಯತೆ ಪಡೆದ ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಸಂಯುಕ್ತ ಆಶ್ರಯದಲ್ಲಿ  ಕಂಬಳ ಓಟಗಾರರ ತರಬೇತಿ ಶಿಬಿರಕ್ಕೆ ಆಯ್ಕೆ ಪ್ರಕ್ರಿಯೆ ಸೆಪ್ಟೆಂಬರ್ 6, 2026ರ ಭಾನುವಾರ ಬೆಳಿಗ್ಗೆ 9.30ಕ್ಕೆ ಕಾರ್ಕಳದ ಮಿಯಾರಿನಲ್ಲಿ ನಡೆಯಲಿದೆ.

ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಯುವಕರು ಮತ್ತು ಓಟಗಾರರು ಬೆಳಿಗ್ಗೆ 9ರಿಂದ 10 ಗಂಟೆಯೊಳಗೆ ಹಾಜರಿದ್ದು ನೋಂದಣಿ ಮಾಡಿಸಿಕೊಳ್ಳಬೇಕು. ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಓಟಗಾರರಿಗೆ ಸೆಪ್ಟೆಂಬರ್ 16ರಿಂದ 26ರವರೆಗೆ 10 ದಿನಗಳ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದೆ.

ಈ ಕುರಿತು ರಾಜ್ಯ ಕಂಬಳ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ಕಂಗಿನಮನೆ ಹಾಗೂ ಜಿಲ್ಲಾ ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ವಿದ್ಯಾಧರ್ ಜೈನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗಾಗಿ ವಿಜಯ್ ಕುಮಾರ್ 9945912877, ವಿದ್ಯಾಧರ 9945791440 ಹಾಗೂ ಅಜಿತ್ ಕುಮಾರ್ 9900701359 ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article