ಆ. 7-8ರಂದು ಆಳ್ವಾಸ್ ನಲ್ಲಿ ಬೃಹತ್ ಉಚಿತ ಉದ್ಯೋಗ ಮೇಳ: 16ನೇ ಆವೃತ್ತಿಯ ಆಳ್ವಾಸ್ ಪ್ರಗತಿಗೆ ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಚಾಲನೆ
ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದು, ದ. ಕ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪ್ರಗತಿಮೇಳದ ರೂವಾರಿ ಡಾ. ಎಂ. ಮೋಹನ ಆಳ್ವರು ಉಪಸ್ಥಿತರಿರಲಿದ್ದು, ಸಮಾರಂಭದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಎ.ಕೆ. ಮಹೇಶ್ ಶೇಖರವರಿಗೆ ಗೌರವ ಸಮರ್ಪಣೆ:
ಆಳ್ವಾಸ್ ಉದ್ಯೋಗ ಮೇಳದ ಆರಂಭಿಕ ಹಂತದಲ್ಲಿ ಯೋಜನೆ, ಸಂಘಟನೆ ಹಾಗೂ ಯಶಸ್ವಿ ಅನುಷ್ಠಾನಕ್ಕೆ ಸಂಪೂರ್ಣ ಸಹಕಾರ ನೀಡಿ ಮಹತ್ವದ ಕೊಡುಗೆ ನೀಡಿದ್ದ, ಇತ್ತೀಚೆಗೆ ಸ್ವರ್ಗಸ್ಥರಾದ ಎ.ಕೆ. ಮಹೇಶ್ ಶೇಖರವರ ಸ್ಮರಣಾರ್ಥ, ಈ ವರ್ಷದ ಆಳ್ವಾಸ್ ಪ್ರಗತಿಯ ಉದ್ಘಾಟನಾ ವೇದಿಕೆಯನ್ನು ಅವರಿಗೆ ಗೌರವಪೂರ್ವಕವಾಗಿ ಸಮರ್ಪಿಸಲಾಗುತ್ತಿದೆ. ಅವರ ಸೇವೆ, ಬದ್ಧತೆ ಹಾಗೂ ಉದ್ಯೋಗ ಮೇಳದ ಬೆಳವಣಿಗೆಯಲ್ಲಿ ಸಲ್ಲಿಸಿದ ಅಮೂಲ್ಯ ಕೊಡುಗೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಈ ಮೂಲಕ ಕೃತಜ್ಞತೆಯಿಂದ ಸ್ಮರಿಸಲಿದೆ.
ಉದ್ಯಮಶೀಲತೆ, ಉದ್ಯೋಗ ಸೃಷ್ಟಿ ಮತ್ತು ಸಮಾಜಮುಖಿ ಸೇವೆಯಲ್ಲಿ ಸಾಧನೆಗೈದ ಕರಾವಳಿಯ ಸಾಧಕರಿಗೆ ಆಳ್ವಾಸ್ ಪ್ರಗತಿಯಲ್ಲಿ ಗೌರವ ಸನ್ಮಾನ:
ಉದ್ಯೋಗ ಸೃಷ್ಟಿ, ಉದ್ಯಮಶೀಲತೆ ಹಾಗೂ ಸಮಾಜಮುಖಿ ಸೇವೆಯಲ್ಲಿ ಗಣನೀಯ ಸಾಧನೆಗೈದು ಸಮಾಜಕ್ಕೆ ಮಾದರಿಯಾಗಿರುವ ಕರಾವಳಿ ಮೂಲದ ಐವರು ಗಣ್ಯರನ್ನು ಈ ಸಂದರ್ಭದಲ್ಲಿ ಗೌರವ ಸನ್ಮಾನ ಮಾಡಲಾಗುವುದು. ಬೆಳ್ತಂಗಡಿಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್‌ನ ಶ್ರೀ ಕ್ಷೇತ್ರ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ, ಎಂಆರ್‌ಜಿ ಗ್ರೂಪ್‌ನ ಸಂಸ್ಥಾಪಕ ಹಾಗೂ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ, ಭವಾನಿ ಗ್ರೂಪ್ ಸಂಸ್ಥಾಪಕ ಹಾಗೂ ಅಧ್ಯಕ್ಷ ಕುಸುಮಾಧರ ಡಿ. ಶೆಟ್ಟಿ, ಪ್ರೊವಿಟ್ ಫುಡ್ಸ್ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ವಿನ್ಸೆಂಟ್ ಕುಟಿನ್ಹಾ ಹಾಗೂ ಎಕ್ಸರ್ಟೀಸ್ ಕಾಂಟ್ರಾಕ್ಸಿಂಗ್ ಕಂಪನಿಯ ಸಹ-ಸಂಸ್ಥಾಪಕ ಮಹಮ್ಮದ್ ಆಶ್ಚಾಕ್ ಸನ್ಮಾನಕ್ಕೆ ಭಾಜನರಾಗಲಿದ್ದಾರೆ.
350ಕ್ಕೂ ಹೆಚ್ಚು ಕಂಪನಿಗಳು, 26,300ಕ್ಕೂ ಅಧಿಕ ಉದ್ಯೋಗಗಳ ಅವಕಾಶ:
ಎಸ್‌ಎಸ್ಎಲ್‌ಸಿ. ಈ ಬಾರಿಯ ಉದ್ಯೋಗಮೇಳದಲ್ಲಿ ದೇಶ ವಿದೇಶಗಳ 350ಕ್ಕೂ ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿದ್ದು, ಐಟಿ, ಐಟಿಇಎಸ್, ಉತ್ಪಾದನೆ, ಬ್ಯಾಂಕಿಂಗ್, ಆರೋಗ್ಯ, ಔಷಧ. ಆತಿಥ್ಯ, ಚಿಲ್ಲರೆ ವ್ಯಾಪಾರ, ಮಾಧ್ಯಮ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ 26300ಕ್ಕೂ ಅಧಿಕ ಉದ್ಯೋಗಾವಕಾಶಗಳು ಲಭ್ಯವಿರಲಿವೆ. ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಹಾಗೂ ವೃತ್ತಿಪರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಹಾಗೂ ಅನುಭವ ಹೊಂದಿದ ಅಭ್ಯರ್ಥಿಗಳು ತಮ್ಮ ಅರ್ಹತೆಗೆ ತಕ್ಕ ಉದ್ಯೋಗಗಳನ್ನು ಪಡೆಯಲು ಇದು ಅತ್ಯುತ್ತಮ ವೇದಿಕೆಯಾಗಿದೆ.
ಉಚಿತ ಹಾಗೂ ಕಡ್ಡಾಯ ನೋಂದಾಣಿ:
ಅಭ್ಯಥಿ೯ಗಳುhttps://alvaspragati.com/candidate-registration ನೋಂದಾಯಿಸಿಕೊಳ್ಳಬಹುದಾಗಿದೆ.
ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪನಿಗಳ ಮಾಹಿತಿನ್ನು www.alvaspragati.com ವೆಬ್‌ಸೈಟ್‌ನಲ್ಲಿ ನಿರಂತರವಾಗಿ ನವೀಕರಿಸಲಾಗುತ್ತದೆ.
ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಆಗಮಿಸುವ ಅಭ್ಯರ್ಥಿಗಳಿಗಾಗಿ ಆಗಸ್ಟ್ 6ರಿಂದ ಉಚಿತ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ ಒದಗಿಸಲಾಗುತ್ತದೆ. ಐಟಿಐ ಹಾಗೂ ಡಿಪ್ಲೊಮಾ ವಿದ್ಯಾಥಿ೯ಗಳಿಗೆ ಉಚಿತ ಬಸ್ ಸೌಲಭ್ಯ ಒದಗಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ: 9611750531 / 9741440490/9008907716/7975223865
ಸೂಚನೆ: ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ನೋಂದಾವಣೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.