ಇರುವೈಲು ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

ಇರುವೈಲು ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ


ಮೂಡುಬಿದಿರೆ: ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿರುವ ಇರುವೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಐ. ರಾಘವೇಂದ್ರ ಭಟ್ ಅವರ ನೇತೃತ್ವದಲ್ಲಿ ಶುಕ್ರವಾರ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ನಡೆಯಿತು.

ಸಾಮೂಹಿಕ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಅಧ್ಯಕ್ಷೆ ರೂಪಾ ರಾಜೇಶ್ ಪೂಜಾರಿ ಕಾಳೂರು ಅಧ್ಯಕ್ಷತೆ ವಹಿಸಿದ್ದರು.

ಇರುವೈಲು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ವತಿಯಿಂದ ಭಜನಾ ಸಂಕೀರ್ತನೆ ನಡೆಯಿತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷೆ ಸುಜಾತ ಜೆ. ಶೆಟ್ಟಿ, ಸಮಿತಿ ಸದಸ್ಯರಾದ ದೀಪಾ ದಿನೇಶ್ ಬಟಾರ, ಶಿವಾನಂದ ನಾಯ್ಕ್ ಕಟ್ಟಣಿಗೆ, ಪ್ರದೀಪ್ ಶೆಟ್ಟಿ, ಶುಭಕರ ಕಾಜವ ಕುವೆಸ್ಥಳ, ಪೂವಪ್ಪ ಸಾಲ್ಯಾನ್, ಪದ್ಮನಾಭ ಪೂಜಾರಿ, ಮೋಹನ್ ನಾಯಕ್, ಮೂಡುಬಿದಿರೆ ಪುರಸಭೆ ಮುಖ್ಯಾಧಿಕಾರಿ ಇಂದು ಎಂ., ಸತೀಶ್ಚಂದ್ರ ಸಾಲ್ಯಾನ್ ಪಾಣಿಲ, ಪ್ರವೀಣ್ ಪೂಜಾರಿ ಪಲ್ಕೆ, ರಾಜೇಶ್ ಪೂಜಾರಿ ಕಾಳೂರು, ಆರ್.ಕೆ. ಪೃಥ್ವಿರಾಜ್, ಕುಮಾರ್ ಪೂಜಾರಿ, ಸ್ವಪ್ನಾ, ಬಬಿತಾ ಉಮೇಶ್ ಸಹಿತ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article