ಜೆಎನ್ ಜಿಗಳು ದೇಶಕ್ಕೆ ಪೂರಕವಾದ ಅಭಿವೃದ್ಧಿ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು: ಶ್ರೀಧರ ಮುಂದಲಮನಿ
ಮೂಡುಬಿದಿರೆ ತಾಲೂಕು ಅಡಳಿತ ಸೌಧದಲ್ಲಿ ಸ್ವಾತಂತ್ರ್ಯ ದಿನಾಚರಣೆ
ಕ್ಷೇತ್ರದ ಶಾಸಕ ಉಮನಾಥ ಎ. ಕೋಟ್ಯಾನ್ ಅಧ್ಯಕ್ಷತೆಯನ್ನು ವಹಿಸಿ ಗೌರವ ರಕ್ಷೆಯನ್ನು ಸ್ವೀಕರಿಸಿ ಮಾತನಾಡಿ, ಮೂಡುಬಿದಿರೆಯಲ್ಲಿ 4.50 ಕೋಟಿ ವೆಚ್ಚದಲ್ಲಿ ಪ್ರವಾಸಿ ಮಂದಿರವನ್ನು ನಿರ್ಮಿಸುತಿದ್ದು ತಾಲೂಕು ಪಂಚಾಯತ್ ಕಟ್ಟಡದ ನಿರ್ಮಾಣವು ಪ್ರಗತಿಯಲ್ಲಿ ಇದೆ .77 ಕೋಟಿ ವೆಚ್ಚದಲ್ಲಿ ಅಮೃತಯೋಜನಡಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಒದಗಿಸುವ ಕಾಮಗಾರಿ ಅಂತಿಮ ಹಂತದಲ್ಲಿ ಇದೆ. ಮೂಡುಬಿದಿರೆಯನ್ನು ಜಿಲ್ಲೆಯಲ್ಲಿ ಮಾದರಿ ತಾಲೂಕಾಗಿ ರೂಪಿಸಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮೂಡುಬಿದಿರೆ ವಲಯದಲ್ಲಿ ಸರ್ಕಾರಿ ಮತ್ತು ಅನುದಾನಿತ ಪ್ರೌಡಶಾಲೆಗಳಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಪ್ರಥಮ ಮತ್ತು ದ್ವೀತಿಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಭೂಮಿ ನಮ್ಮ ನೀರು ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೇಯಲ್ಲಿ ವಿಜೇತರಾದ ಬೆಳುವಾಯಿ ಮರಿಯಂ ನಿಕೇತನ್ ನ ನಿಲೀಮಾ ಜೆನ್ ವಿನ್ ಫೆನಾ೯ಂಡಿಸ್, ಸಿಮ್ರಾ ಫಾತಿಮಾ ಹಾಗೂ ಮೂಡುಬಿದಿರೆ ಜೈನ ಪ್ರೌಢಶಾಲೆಯ ಸಮಥ್೯ ಆರ್. ಆಚಾಯ೯ ಅವರಿಗೆ ಬಹುಮಾನ ವಿತರಿಸಲಾಯಿತು.
ವೇದಿಕೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಪಿ., ಪೋಲಿಸ್ ನಿರೀಕ್ಷಕ ರಾಜೇಂದ್ರ ಬಿ., ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಕ್ಷಪ್ಪ, ವಲಯ ಆರಣ್ಯಾಧಿಕಾರಿ ಕಿರಣ್ ಕುಮಾರ್, ಪುರಸಭಾ ಮುಖ್ಯಾಧಿಕಾರಿ ಇಂದು ಎಂ., ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಕನ್ನಡ ಜಾಗೃತಿ ಸಮಿತಿಯ ಜಿಲ್ಲಾ ಸದಸ್ಯ ರಾಜೇಶ್ ಕಡಲಕೆರೆ, ಮೂಡುಬಿದಿರೆ ಸಮುದಾಯ ಅರೋಗ್ಯ ಕೇಂದ್ರದ ಪ್ರಭಾರ ವೈದ್ಯಾಧಿಕಾರಿ ಡಾ. ಅಕ್ಷತಾ ನಾಯಕ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ದೊರೆ ಸ್ವಾಮಿ ಹಾಗೂ ನಿವೃತ್ತ ಸೈನಿಕರು ಉಪಸ್ಥಿತರಿದ್ದರು.
ಕಾಯ೯ಕ್ರಮಕ್ಕೂ ಮುನ್ನ ಪೋಲಿಸ್ ಗೃಹರಕ್ಷಕ, ಎನ್‌ಸಿಸಿ, ಎನ್ ಎಸ್ ಎಸ್ ಹಾಗೂ ವಿವಿಧ ಶಾಲಾ ಕಾಲೇಜು ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಉಪತಹಸಿಲ್ದಾರ್ ಕೆ. ರಾಮ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಮಾಧಿಕಾರಿ ಅಜು೯ನ್ ಸಜ್ಜನ್ ಕಾಯ೯ಕ್ರಮ ನಿರೂಪಿಸಿದರು.

