ಸಂಕ್ರಾಂತಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ಕಾಯ೯ಕ್ರಮ
Friday, August 14, 2026
ಮೂಡುಬಿದಿರೆ: ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಡುಬಿದಿರೆ ತಾಲೂಕಿನ ಗಾಡಿಪಲ್ಕೆ ಕಾರ್ಯಕ್ಷೇತ್ರದ ಸಂಕ್ರಾಂತಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ್ ಪ್ರಭು ಕಾಯ೯ಕ್ರಮವನ್ನು ಉದ್ಘಾಟಿಸಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕೇಂದ್ರ ಕಚೇರಿಯ ಜ್ಞಾನವಿಕಾಸ ವಿಭಾಗದ ಯೋಜನಾಧಿಕಾರಿ ಮಲ್ಲಿಕಾ ಅವರು ಭಾಗವಹಿಸಿ ಪೌಷ್ಟಿಕ ಆಹಾರದ ಮಹತ್ವ, ಮನೆಯಲ್ಲಿ ಅಳವಡಿಸಬೇಕಾದ ಆಹಾರ ಕ್ರಮ ಕುರಿತು ತಿಳಿಸಿದರು.
ಒಕ್ಕೂಟದ ಗೌರವ ಅಧ್ಯಕ್ಷ ಸುರೇಶ್ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ವಲಯದ ಮೇಲ್ವಿಚಾರಕ ಸರಸ್ವತಿ, ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ವಿನುತಾ, ಸೇವಾಪ್ರತಿನಿಧಿ ವನಜಾಕ್ಷಿ ಹಾಗೂ ಕೇಂದ್ರದ ಸಂಯೋಜಕರು ಸದಸ್ಯರು ಉಪಸ್ಥಿತರಿದ್ದರು.