ಪೊಲೀಸ್ ಸಿಬ್ಬಂದಿ ಶಾಂತಪ್ಪ ಕೇಸಿಗೆ ತಡೆಯಾಜ್ಞೆ ನೀಡಿದ ಉಚ್ಛ ನ್ಯಾಯಾಲಯ
Sunday, August 2, 2026
ಮೂಡುಬಿದಿರೆ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿಯಾಗಿದ್ದ ಶಾಂತಪ್ಪ ಅವರ ವಿರುದ್ಧದ ಕೇಸಿಗೆ ರಾಜ್ಯ ಉಚ್ಚ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ.
ದೂರು ನೀಡಲು ಠಾಣೆಗೆ ಬಂದಿದ್ದ ಮಹಿಳೆಯೋರ್ವರು ತಮ್ಮ ದೂರು ಅರ್ಜಿಯಲ್ಲಿ ನೀಡಿದ್ದ ಮೊಬೈಲ್ ಸಂಖ್ಯೆಯನ್ನು ಪಡೆದು ಆ ನಂಬರ್ ಗೆ ಕರೆಮಾಡಿ ಅಸಭ್ಯ ಮತ್ತು ಅಶ್ಲೀಲವಾಗಿ ಮಾತನಾಡಿ ಕಿರುಕುಳ ನೀಡಿರುವ ಬಗ್ಗೆ ಮೂಡುಬಿದಿರೆ ಠಾಣೆಗೆ ಮಹಿಳೆ ದೂರು ನೀಡಿದ್ದು ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಅಲ್ಲದೆ ಶಾಂತಪ್ಪ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿತ್ತು.
ಈ ದೂರಿನ ಕುರಿತಾಗಿ ಶಾಂತಪ್ಪ ಅವರು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ ಹೈಕೋರ್ಟ್ ಈ ಕೇಸ್ ಗೆ ತಡೆಯಾಜ್ಞೆ ನೀಡಿದೆ.
ಶಾಂತಪ್ಪ ಪರವಾಗಿ ಮೂಡುಬಿದಿರೆಯ ನ್ಯಾಯವಾದಿ ಮರ್ವಿನ್ ಜಾನ್ಸನ್ ಲೋಬೋ ಅವರು ವಾದಿಸಿದ್ದರು.