ಸ್ವಾತಂತ್ರ್ಯ ನಮ್ಮ ಹಕ್ಕು ಮಾತ್ರವಲ್ಲ ಜವಾಬ್ದಾರಿಯೂ ಹೌದು: ಡಾ. ಆಶೀರ್ವಾದ್ ಎಂ.ಪಿ.

ಸ್ವಾತಂತ್ರ್ಯ ನಮ್ಮ ಹಕ್ಕು ಮಾತ್ರವಲ್ಲ ಜವಾಬ್ದಾರಿಯೂ ಹೌದು: ಡಾ. ಆಶೀರ್ವಾದ್ ಎಂ.ಪಿ.


ಮೂಡುಬಿದಿರೆ: ಸ್ವಾತಂತ್ರ್ಯ ನಮ್ಮ ಹಕ್ಕು ಮಾತ್ರವಲ್ಲ, ಜವಾಬ್ದಾರಿಯೂ ಹೌದು. ದೇಶ ಬಲಿಷ್ಠವಾಗಬೇಕಾದರೆ ಗುರು-ಹಿರಿಯರನ್ನು ಗೌರವಿಸುವುದರ ಜತೆಗೆ ನಮ್ಮ ಕನಸುಗಳನ್ನು ಸಾಕಾರಗೊಳಿಸುವಲ್ಲಿ ಯಶಸ್ವಿಯಾಗಬೇಕು ಎಂದು ಮೂಡುಬಿದಿರೆ ರೋಟರಿ ಕ್ಲಬ್ ನ ಅಧ್ಯಕ್ಷ ಡಾ. ಆಶೀರ್ವಾದ್ ಎಂ.ಪಿ. ಹೇಳಿದರು. 

ಅವರು ರೋಟರಿ ವಿದ್ಯಾಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜವನ್ನರಳಿಸಿ ಅಮರಾವತಿ ಸಭಾಭವನದಲ್ಲಿ ನಡೆದ  ಕಾಯ೯ಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.

ರೋಟರಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎ.ಕೆ. ರಾವ್ ಮಾತನಾಡಿ, ಶಿಕ್ಷಣದ ಜತೆಗೆ ವಿದ್ಯಾರ್ಥಿಗಳಲ್ಲಿ ಮೌಲ್ಯಗಳನ್ನು ಬೆಳೆಸಬೇಕು. ಮುಂದಿನ ಪೀಳಿಗೆಗೆ ನಮ್ಮ ಅನುಭವ ಮತ್ತು ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗುವ ಮೂಲಕ ದೇಶದ ಪ್ರಗತಿಯಲ್ಲಿ ಪ್ರತಿಯೊಬ್ಬರೂ ಪಾಲುದಾರರಾಗಬೇಕು ಎಂದು ಹೇಳಿದರು.

ರೋಟರಿ ವಿದ್ಯಾಸಂಸ್ಥೆಯ ವಾದ್ಯವೃಂದ ತಂಡ, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಕಬ್-ಬುಲ್‌ಬುಲ್, ಬನ್ನೀಸ್ ಹಾಗೂ ವಿವಿಧ ದಳಗಳ ವಿದ್ಯಾರ್ಥಿಗಳು ಶಿಸ್ತಿನಿಂದ ಪಥಸಂಚಲನದಲ್ಲಿ ಭಾಗವಹಿಸಿದರು.

ಇದೇ ಸಂದರ್ಭದಲ್ಲಿ ಸ್ಕೌಟ್-ಗೈಡ್ಸ್ ರಾಜ್ಯ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮವನ್ನು ಗೈಡ್ ಕ್ಯಾಪ್ಟನ್ ವಿನಯಾ ನೆರವೇರಿಸಿದರು.

ರೋಟರಿ ಎಜ್ಯು ಕೇಷನ್ ಸೊಸೈಟಿಯ ಅಧ್ಯಕ್ಷ ನಾರಾಯಣ ಪಿ. ಎಂ. ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವ್ಯಸನ ಮತ್ತು ಮೊಬೈಲ್ ಬಳಕೆಯಿಂದ ದೂರವಿದ್ದು, ಉತ್ತಮ ಶಿಕ್ಷಣ ಪಡೆದು ಸುಸಂಸ್ಕೃತರಾಗಿ ದೇಶದ ಉತ್ತಮ ಪ್ರಜೆಗಳಾಗಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮಕ್ಕೆ ರೋಟರಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ವಿನಯ್ ಕುಮಾರ್ ಹೆಗ್ಡೆ, ಕೋಶಾಧಿಕಾರಿ ನಾಗರಾಜ್ ಬಿ., ರೋಟರಿ ಕ್ಲಬ್ ಮೂಡುಬಿದಿರೆಯ ಕಾರ್ಯದರ್ಶಿ ಪ್ರಜ್ವಲ್ ಆಚಾರ್, ರೋಟರಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷ ನಿಶ್ಮಿತ ನಾಗರಾಜ್ ಹೆಗ್ಡೆ, ರೋಟರಿ ಪದವಿ ಪೂರ್ವ ಮತ್ತು ಕೇಂದ್ರೀಯ ಶಾಲೆಯ ಸಂಚಾಲಕ ಜೆ. ಡಬ್ಲ್ಯೂ. ಪಿಂಟೋ, ರೋಟರಿ ಶಾಲೆಯ ಸಂಚಾಲಕ ಪ್ರವೀಣ್ ಚಂದ್ರ ಜೈನ್, ಮಂಡಳಿ ಸದಸ್ಯರು, ರೋಟರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರವಿ ಕುಮಾರ್, ರೋಟರಿ ಕೇಂದ್ರೀಯ ಶಾಲೆಯ ಪ್ರಾಂಶುಪಾಲ ಲಕ್ಷೀ ಮರಾಠೆ, ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ತಿಲಕಾ ಅನಂತವೀರ ಜೈನ್, ರೋಟರಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರು, ರೋಟರಿ ಕ್ಲಬ್ ಸದಸ್ಯರು ಹಾಗೂ ರೋಟರಿ ಇನ್ನರ್ ವೀಲ್ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.

ರೋಟರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರವಿ ಕುಮಾರ್ ಅತಿಥಿಗಳನ್ನು ಸ್ವಾಗತಿಸಿದರು. ಉಪಪ್ರಾಂಶುಪಾಲಕಿ ವೈಶಾಲಿ ಮುಖ್ಯ ಅತಿಥಿಯನ್ನು ಪರಿಚಯಿಸಿದರು. ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ತಿಲಕಾ ಅನಂತವೀರ ಜೈನ್ ವಂದಿಸಿದರು. ರೋಟರಿ ಕೇಂದ್ರೀಯ ಶಾಲೆಯ ಸಹಶಿಕ್ಷಕಿ ಶ್ವೇತಾ ಹರೀಶ್ ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article