ಮೂಡುಬಿದಿರೆ ಯುವ ಬಂಟರ ಸಂಘದ ಕಾರ್ಯಕಾರಿ ಸದಸ್ಯರ ಸಭೆ
ಬಂಟರ ಸಂಘದ ಅಧ್ಯಕ್ಷರಾದ ತಿಮ್ಮಯ್ಯ ಶೆಟ್ಟಿ ಅವರು ಮಾತನಾಡಿ, ಬಂಟ ಸಮಾಜದ ಪ್ರತಿಯೊಬ್ಬರೂ ಒಂದೇ ಮನಸ್ಸಿನಿಂದ ಒಗ್ಗಟ್ಟಾಗಿ ಸಂಘಟಿತರಾಗುವ ಮೂಲಕ ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಆಳ್ವಾಸ್ ಎಜುಕೇಶನ್ ಟ್ರಸ್ಟ್‌ನ ಟ್ರಸ್ಟಿ ಮತ್ತು ಯುವ ಬಂಟರ ಸಂಘದ ಗೌರವಾಧ್ಯಕ್ಷ ವಿವೇಕ್ ಆಳ್ವ ಅವರು ಮಾತನಾಡಿ, ಸದಸ್ಯತ್ವ ನೋಂದಾವಣೆಯ ಸಮಗ್ರ ಮಾಹಿತಿ, ಸಮಯ ಪಾಲನೆ ಹಾಗೂ ಯುವ ಸಂಘಟನೆಯ ಒಗ್ಗಟ್ಟಿನ ಮಹತ್ವದ ಕುರಿತು ವಿವರಿಸಿದರು.
ಯುವ ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಸಂದೀಪ್ ಶೆಟ್ಟಿ ಬೆಳುವಾಯಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಕಾರ್ಯಕಾರಿ ಸದಸ್ಯರ ಸಭೆಯನ್ನು ಕರೆದ ಉದ್ದೇಶ ಹಾಗೂ ಸಂಘಟನೆಯನ್ನು ಇನ್ನಷ್ಟು ಕ್ರಿಯಾಶೀಲ ಮತ್ತು ಬಲಿಷ್ಠವಾಗಿ ರೂಪಿಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.
ರವಿಪ್ರಸಾದ್ ಶೆಟ್ಟಿ ಅವರು ಸಂಘಟನೆಯಲ್ಲಿ ಯುವಶಕ್ತಿಯ ಪಾತ್ರದ ಕುರಿತು ಉಪನ್ಯಾಸ ನೀಡಿದರು.
ಸಭೆಯಲ್ಲಿ ಬಂಟರ ಸಂಘದ ಕಾರ್ಯದರ್ಶಿ ಸುಚರಿತ ಶೆಟ್ಟಿ, ಕೋಶಾಧಿಕಾರಿ ಪುರುಷೋತ್ತಮ ಶೆಟ್ಟಿ, ಗೌರವಾಧ್ಯಕ್ಷ ಜಯಕುಮಾರ್ ಶೆಟ್ಟಿ, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಹೆಗ್ಡೆ ಮತ್ತು ಯುವ ಬಂಟರ ಸಂಘದ ಕಾರ್ಯದರ್ಶಿ ರಮೇಶ್ ಶೆಟ್ಟಿ ಮಿಜಾರು, ಕೋಶಾಧಿಕಾರಿ ಭರತ್ ಶೆಟ್ಟಿ ಹಾಗೂ ಯುವ ಬಂಟರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಅನುಷಾ ಶೆಟ್ಟಿ ಸ್ವಾಗತಿಸಿದರು. ನಿಹಾರಿಕ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಶರತ್ ಶೆಟ್ಟಿ ವಂದಿಸಿದರು.