ಮೂಡುಬಿದಿರೆ ಆಟೋ ಚಾಲಕ-ಮಾಲಕರ ಸಂಘದಿಂದ ಸ್ವಾತಂತ್ರ್ಯೋತ್ಸವ: ವಕೀಲರ ಸಂಘದ ನೂತನ ಅಧ್ಯಕ್ಷರಿಗೆ ಸನ್ಮಾನ
Saturday, August 15, 2026
ಮೂಡುಬಿದಿರೆ: ಇಲ್ಲಿನ ಆಟೋರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಕೃಷ್ಣಕಟ್ಟೆಯ ಮುಂಭಾಗದಲ್ಲಿ ಆಚರಿಸಿದರು.
ಮೂಡಬಿದಿರೆ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶರತ್ ಡಿ ಶೆಟ್ಟಿ , ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಮೂಡುಬಿದಿರೆ ಪೊಲೀಸ್ ಉಪನಿರೀಕ್ಷಕಿ ಪ್ರತಿಭಾ ಕೆ.ಸಿ, ಉದ್ಯಮಿ ಹೈದರ್ ಅಲಿ ಸಂಗಬೆಟ್ಟು, ಸಂಘದ ಅಧ್ಯಕ್ಷ ದೀಪಕ್ ರಾಜ್, ಭೂಮಿ ಎಸ್ ಶೆಟ್ಟಿ, ಸಂಘದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.
ಕೆ ಪ್ರದೀಪ್ ರೈ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.